ಆರೋಪಿಯ ಬಂಧನ – News Karnataka Kannada (ನ್ಯೂಸ್ ಕರ್ನಾಟಕ ಕನ್ನಡ)

ಲಕ್ನೋ: ಉತ್ತರ ಪ್ರದೇಶದ  ಬಿಜ್ನೋರ್‌ನಲ್ಲಿ ಹೋಳಿ ಸಂಭ್ರಮಾಚರಣೆ  ವೇಳೆ ಮುಸ್ಲಿಂ ಮಹಿಳೆಗೆ ಕಿರುಕುಳ ನೀಡಿದ್ದಕ್ಕೆ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.

ವ್ಯಕ್ತಿಯ ಜೊತೆಗೆ ಮೂವರು ಅಪ್ರಾಪ್ತರನ್ನು ವಶಕ್ಕೆ ಪಡೆದು ವಿಚಾರಣೆಗೊಳಪಡಿಸಿದ್ದಾರೆ.

ಮುಸ್ಲಿಂ ದಂಪತಿ ಬೈಕ್‌ನಲ್ಲಿ ಹೋಗುತ್ತಿದ್ದರು. ಈ ವೇಳೆ ಸ್ಥಳದಲ್ಲೇ ಹೋಳಿ ಸಂಭ್ರಮಾಚರಣೆ ಮಾಡುತ್ತಿದ್ದ ಗುಂಪೊಂದು, ಬೈಕ್‌ನಲ್ಲಿ ತೆರಳುತ್ತಿದ್ದ ದಂಪತಿಯನ್ನು ತಡೆದಿದ್ದಾರೆ. ಅಲ್ಲದೇ ಪೈಪ್‌ ಮೂಲಕ ಮಹಿಳೆ ಮೇಲೆ ನೀರು ಹಾರಿಸಿದ್ದಾರೆ. ಇದಕ್ಕೆ ಮಹಿಳೆ ವಿರೋಧಿಸಿದರೂ ಗುಂಪು ಕಿರುಕುಳ ನೀಡುವುದನ್ನು ನಿಲ್ಲಿಸಲಿಲ್ಲ. ಮುಸ್ಲಿಂ ಮಹಿಳೆ ಮುಖಕ್ಕೆ ಬಲವಂತವಾಗಿ ಬಣ್ಣ ಬಳಿದಿದ್ದಾರೆ.

ಈ ದೃಶ್ಯದ ವೀಡಿಯೋ ಸೋಷಿಯಲ್‌ ಮೀಡಿಯಾದಲ್ಲಿ ಹರಿದಾಡುತ್ತಿದೆ.

ವಿಡಿಯೋ ವೈರಲ್ ಆದ ಕೂಡಲೇ ಬಿಜ್ನೋರ್ ಪೊಲೀಸ್ ಮುಖ್ಯಸ್ಥ ನೀರಜ್ ಕುಮಾರ್ ಜದೌನ್, ಸ್ಥಳೀಯ ಪೊಲೀಸರಿಗೆ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ.

ಸ್ವಯಂಪ್ರೇರಣೆಯಿಂದ ಮಹಿಳೆಗೆ ನೋವುಂಟು ಮಾಡುವುದು ಮತ್ತು ಹಲ್ಲೆ ಸೇರಿದಂತೆ ಹಲವು ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Font Awesome Icons

Leave a Reply

Your email address will not be published. Required fields are marked *