ಆರೋಪಿ ಪೊಲೀಸರ ವಶಕ್ಕೆ – News Karnataka Kannada (ನ್ಯೂಸ್ ಕರ್ನಾಟಕ ಕನ್ನಡ)

ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ದಲಿತ ಸಮುದಾಯದ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಆಕೆಯನ್ನು ಗರ್ಭಿಣಿ ಮಾಡಿ ಪರಾರಿಯಾಗಿದ್ದ ಆರೋಪಿ ಸದ್ದಾಂ ಹುಸೇನ್ ಕಾಲಿಗೆ ಗುಂಡೇಟು ಹೊಡೆದು ಪೊಲೀಸರು ಬಂಧಿಸಿದ್ದಾರೆ.

ಸದ್ದಾಂ ಹುಸೇನ್‌ನನ್ನು ಬಂಧಿಸಿ ಸ್ಥಳ ಮಹಜರು ಮಾಡಲು ಕರೆದೊಯ್ಯುತ್ತಿದ್ದಾಗ ಪೊಲೀಸರ ಮೇಲೆ ದಾಳಿ ಮಾಡಿ, ತಪ್ಪಿಸಿಕೊಳ್ಳಲು ಯತ್ನಿಸಿದ್ದನು. ಈ ವೇಳೆ ಧಾರವಾಡ ವಿದ್ಯಾಗಿರಿ ಠಾಣೆಯ ಸಿಪಿಐ ಸಂಗಮೇಶ ದಿಡಿಗನಾಳ ಅವರು ಆರೋಪಿ ಕಾಲಿಗೆ ಗುಂಡು ಹಾರಿಸಿ ಬಂಧಿಸಿದ್ದಾರೆ. ಸದ್ದಾಂ ಹುಸೇನ್‌‌ಗೆ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಾಗುತ್ತಿದೆ.

ಹೊಟ್ಟೆ ನೋವಿನಿಂದ ಬಳಲುತ್ತಿದ್ದ ಬಾಲಕಿಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋದಾಗ ವೈದ್ಯರು ಆಘಾತಕಾರಿ ವಿಷಯ ತಿಳಿಸಿದ್ದರು. ಮಗಳು ಗರ್ಭಿಣಿಯಾದ ಸುದ್ದಿ ತಿಳಿದು ಪೋಷಕರು ಕಂಗಾಲಾಗಿದ್ದರು. ಹೀಗಾಗಿ ಆರೋಪಿ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿ ಹಿಂದು ಸಂಘಟನೆಗಳು ಪ್ರತಿಭಟನೆ ನಡೆಸಿದ ಬೆನ್ನಲ್ಲೇ ಪರಾರಿಯಾಗಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಸದ್ದಾಂ ಹುಸೇನ್ ಬಂಧಿತ ಆರೋಪಿ.ಅಪ್ರಾಪ್ತೆಯನ್ನು ಗರ್ಭಿಣಿ ಮಾಡಿದ್ದ ಯುವಕ, ಇದರ ಬಗ್ಗೆ ಪೊಲೀಸ್ ಠಾಣೆಗೆ ದೂರು ನೀಡಿದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದ ಎನ್ನಲಾಗಿದೆ. ಹೀಗಾಗಿ ಯುವಕನ ವಿರುದ್ಧ ಹಿಂದುಪರ ಸಂಘಟನೆಗಳು ಆಕ್ರೋಶ ಹೊರಹಾಕಿ, ಆರೋಪಿಯನ್ನು ಕೂಡಲೇ ಬಂಧಿಸುವಂತೆ ಶುಕ್ರವಾರ ಸಂಜೆ ನವನಗರ ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಿದ್ದರು.

ಕಿಮ್ಸ್ ಆಸ್ಪತ್ರೆಯಲ್ಲಿ ಅಪ್ರಾಪ್ತ ವಯಸ್ಸಿನ ಬಾಲಕಿಗೆ ಚಿಕಿತ್ಸೆ ಕೊಡಿಸಲಾಗುತ್ತಿದೆ. ಅಪ್ರಾಪ್ತೆ ಆಸ್ಪತ್ರೆಗೆ ಹೋಗಿದ್ದನ್ನು ಅರಿತ ಯುವಕ, ಆಕೆ ಕುಟುಂಬಸ್ಥರಿಗೆ ಕರೆ ಮಾಡಿ ಜೀವ ಬೆದರಿಕೆ ಹಾಕಿದ್ದನು. ಹೀಗಾಗಿ ಯುವಕನ ವಿರುದ್ಧ ಕಠಿಣ ಕಾನೂನು ಕ್ರಮ ತೆಗೆದುಕೊಳ್ಳಬೇಕು ಎಂದು ಹಿಂದು ಪರ ಸಂಘಟನೆಗಳ ಆಕ್ರೋಶ ಹೊರಹಾಕಿದೆ.

Font Awesome Icons

Leave a Reply

Your email address will not be published. Required fields are marked *