ಉಡುಪಿ: ನೇಜಾರು ತಾಯಿ ಮತ್ತು ಮೂವರು ಮಕ್ಕಳ ಕಗ್ಗೊಲೆ ಪ್ರಕರಣದ ಆರೋಪಿ ಪ್ರವೀಣ್ ಚೌಗುಲೆಯನ್ನು ಪೊಲೀಸರು ಬುಧವಾರ ಉಡುಪಿ ಜಿಲ್ಲಾ ಎರಡನೇ ಹೆಚ್ಚ್ಚುವರಿ ಸತ್ರ ನ್ಯಾಯಾಲಯಕ್ಕೆ ಹಾಜರುಪಡಿಸಿದರು.
ಬೆಂಗಳೂರಿನ ಪರಪ್ಪನ ಅಗ್ರಹಾರದ ಜೈಲಿನಲ್ಲಿರುವ ಆರೋಪಿ ಪ್ರವೀಣ್ ಚೌಗುಲೆಯನ್ನು ಬಿಗಿ ಪೊಲೀಸ್ ಭದ್ರತೆಯಲ್ಲಿ ಪ್ರಕರಣದ ತನಿಖಾಧಿಕಾರಿ ಯಾಗಿರುವ ಮಲ್ಪೆ ಪೊಲೀಸ್ ವೃತ್ತ ನಿರೀಕ್ಷಕ ಕೃಷ್ಣ ಎಸ್.ಕೆ. ನ್ಯಾಯಾಲಯಕ್ಕೆ ಕರೆತಂದರು. ಬಳಿಕ ಆರೋಪಿ ಮೇಲೆೆ ಆಪಾದನೆ ವಾಚಿಸುವ ಪ್ರಕ್ರಿಯೆ ನಡೆಯಿತು. ನ್ಯಾಯಾಧೀಶ ದಿನೇಶ್ ಹೆಗ್ಡೆ ಆಪಾದನೆ ವಾಚಿಸುವ ಪ್ರಕ್ರಿಯೆಯನ್ನು ನಡೆಸಿದರು. ಬಳಿಕ ಆರೋಪಿಯನ್ನು ಬಿಗಿ ಭದ್ರತೆಯಲ್ಲಿ ಜೈಲಿಗೆ ಕರೆದೊಯ್ಯಲಾಯಿತು. ಈ ಸಂದರ್ಭದಲ್ಲಿ ಪ್ರಕರಣದ ವಿಶೇಷ ಸರಕಾರಿ ಅಭಿಯೋಜಕ ಶಿವ ಪ್ರಸಾದ್ ಆಳ್ವ ಹಾಜರಿದ್ದರು. ಭದ್ರತೆ ಉಸ್ತುವಾರಿಯನ್ನು ಪ್ರಭು ಡಿ.ಟಿ. ವಹಿಸಿದ್ದರು.