ಚಾಮರಾಜನಗರ ಮಾರ್ಚ್,12,2024(www.justkannada.in): ಆರ್. ಧ್ರುವನಾರಾಯಣ್ ಅವರು ಮಾದರಿ ಜನನಾಯಕರಾಗಿದ್ದರು. ಕಾಲಾನಂತರವೂ ಅವರ ಜನಪ್ರಿಯತೆ ಬೆಳೆಯುತ್ತಿದೆ ಎಂದು ಸಿ.ಎಂ ಸಿದ್ದರಾಮಯ್ಯ ಅವರು ಸ್ಮರಿಸಿದರು.
ದಿವಂಗತ ಆರ್. ಧ್ರುವನಾರಾಯಣ್ ಅವರ ಪುಣ್ಯಸ್ಮರಣೆ ಕಾರ್ಯಕ್ರಮಕ್ಕಾಗಿ ಚಾಮರಾಜನಗರಕ್ಕೆ ಆಗಮಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಹೆಗ್ಗವಾಡಿಗೆ ತೆರಳಿ ದ್ರುವನಾರಾಯಣ್ ಅವರ ಸಮಾಧಿಗೆ ನಮನ ಸಲ್ಲಿಸಿದರು. ಬಳಿಕ ವೇದಿಕೆ ಕಾರ್ಯಕ್ರಮಕ್ಕೆ ಆಗಮಿಸಿ ಅವರ ಭಾಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಮಾತನಾಡಿದರು.
ಕ್ಷೇತ್ರದ ಅಭಿವೃದ್ಧಿ ಮತ್ತು ಚಾಮರಾಜನಗರ ಜಿಲ್ಲೆಯ ಪ್ರಗತಿ ನಿರಂತರ ಪ್ರಯತ್ನ ಮಾಡಿದ್ದ ಧ್ರುವನಾರಾಯಣ್ ಅವರು ಜನರ ಮಧ್ಯ ಓಡಾಡದ ದಿನವೇ ಇಲ್ಲ. ಇವರದ್ದು ಜನಪರ ರಾಜಕಾರಣಕ್ಕೆ ಮಾದರಿ ವ್ಯಕ್ತಿತ್ವ ಎಂದರು.
ಕಾಂಗ್ರೆಸ್ ಸಿದ್ಧಾಂತ ಮತ್ತು ಕಾಂಗ್ರೆಸ್ ಪಕ್ಷದ ಆಸ್ತಿಯಾಗಿದ್ದ ದ್ರುವನಾರಾಯಣ್ ಅವರು ವಿದ್ಯಾರ್ಥಿ ಕಾಂಗ್ರೆಸ್ ಅವಧಿಯಿಂದ ಪಕ್ಷದ ಕಾರ್ಯಾಧ್ಯಕ್ಷರಾಗುವವರೆಗೂ ಬೆಳೆದರು. ಶಾಸಕರಾಗಿ, ಸಂಸದರಾಗಿ ಕ್ಷೇತ್ರದ ಅಭಿವೃದ್ಧಿಗೆ ನಿರಂತರ ಶ್ರಮಿಸಿದವರು. ಹೀಗಾಗಿ ಇವರ ಅಗಲಿಕೆ ಕೇವಲ ಕಾಂಗ್ರೆಸ್ ಪಕ್ಷಕ್ಕೆ ಮಾತ್ರವಲ್ಲ, ಕನ್ನಡ ನಾಡಿಗೆ ತುಂಬಲಾರದ ನಷ್ಟ ಆಗಿದೆ ಎಂದರು.
ಅಜಾತಶತ್ರು ಆಗಿದ್ದು ಧ್ರುವನಾರಾಯಣ್ ಅವರ ವ್ಯಕ್ತಿತ್ವವನ್ನೇ ಅವರ ಪುತ್ರ ಶಾಸಕ ದರ್ಶನ್ ಧ್ರುವನಾರಾಯಣ್ ಅವರೂ ಹೊಂದಿದ್ದು ಜನಪರತೆ ಬೆಳೆಸಿಕೊಂಡಿದ್ದಾರೆ. ಇವರಿಗೆ ನಾನು ಸಂಪೂರ್ಣ, ಸಹಕಾರ, ಬೆಂಬಲ ನೀಡುತ್ತೇನೆ ಎಂದರು.
ರಾಜಕಾರಣಿಗೆ ಸೈದ್ಧಾಂತಿಕ ಸ್ಪಷ್ಟತೆ ಮತ್ತು ಬದ್ಧತೆ ಅತ್ಯಗತ್ಯ. ಧ್ರುವನಾರಾಯಣ್ ಅವರಿಗೆ ಇವೆರಡೂ ಇತ್ತು. ಸಮಾಜದ ಅಸಮಾನತೆ ಅಳಿಸಲು, ದುರ್ಬಲರಿಗೆ ಆರ್ಥಿಕವಾಗಿ, ಸಾಮಾಜಿಕವಾಗಿ ಶಕ್ತಿ ತುಂಬುವ ಕೆಲಸವನ್ನು ಅವರು ಮಾಡುತ್ತಿದ್ದರು.
ಅಂಬೇಡ್ಕರ್ ಅವರ ಸಂವಿಧಾನದ ಬಗ್ಗೆ ದ್ರುವನಾರಾಯಣ್ ಅಪಾರವಾದ ನಂಬಿಕೆ, ಗೌರವ ಹೊಂದಿದ್ದರು. ಈಗ ಈ ಸಂವಿಧಾನವನ್ನು ಬದಲಾಯಿಸುವ ಪ್ರಯತ್ನಗಳು ನಡೆಯುತ್ತಿವೆ. ಸಂವಿಧಾನ ಉಳಿದರೆ ಮಾತ್ರ ನಾವೂ ನೀವೂ ಉಳಿಯುತ್ತೇವೆ ಎಂದು ಎಚ್ಚರಿಸಿದರು.
ಸಮಾಜ ಕಲ್ಯಾಣ ಸಚಿವ ಎಚ್.ಸಿ.ಮಹದೇವಪ್ಪ, ಪಶುಸಂಗೋಪನಾ ಸಚಿವ ಕೆ.ವೆಂಕಟೇಶ್, ಶಾಸಕ ದರ್ಶನ್ ದ್ರುವನಾರಾಯಣ್, ಅನಿಲ್ ಚಿಕ್ ಮಾದು, ರವಿಶಂಕರ್, ಮಾಜಿ ಶಾಸಕರಾದ ಯತೀಂದ್ರ ಸಿದ್ದರಾಮಯ್ಯ ಸೇರಿ ಮೈಸೂರು, ಚಾಮರಾಜನಗರ ಜಿಲ್ಲೆಯ ಶಾಸಕರುಗಳು, ಮುಖಂಡರು ಮತ್ತು ಜಿಲ್ಲಾ ಮುಖಂಡರುಗಳು ಉಪಸ್ಥಿತರಿದ್ದರು.
Key words: R.Dhruvanarayan- Model- leader-CM Siddaramaiah.
ENGLISH SUMMARY…
R.Dhruvanarayan is a model leader. His popularity is growing even after his death : CM Siddaramaiah
Chamarajanagara March 12: Chief Minister Siddaramaiah said that R.Druvanarayan was a model leader and his popularity is increasing even after his death.
The Chief Minister, who arrived in Chamarajanagar for the memorial service of late R. Dhruvanarayan, proceeded to Heggavadi and paid his obeisance at the grave of Dhruvanarayan. Later, he arrived at the stage programme, paid floral tributes and addressed the gathering.
Dhruvanarayan, who had been constantly striving for the development of the constituency and the progress of Chamarajanagar district.Not a day went by without him meeting the people. He said that he is a model personality for populist politics.
A Congress ideologue and an asset to the Congress party, Druvanarayan rose from his student Congress days to become the party’s working president. He worked continuously for the development of the constituency as MLA and MP. Therefore, his passing away is an irrepairable loss not only to the Congress party but also to the state, he said.
Known to be a Ajatashathru, Dhruvanarayan’s son MLA Darshan Dhruvanarayan too has his father’s personality and has also developed popularity. The CM said that he would extend him full cooperation and support.
Ideological clarity and commitment are essential for a politician. Dhruvanarayan had both. He was working to eradicate the inequality of the society, empowering the weak economically and socially.
Dhruvanarayan had great faith and respect for Ambedkar’s constitution. Now there are efforts to change this constitution. The CM warned that we will survive only if the constitution survives.
Social Welfare Minister HC Mahadevappa, Animal Husbandry Minister K. Venkatesh, MLA Darshan Dhruvanarayan, Anil Chik Madu, Ravi Shankar, former MLA Yathindra Siddaramaiah and legislators,leaders of Mysuru and Chamarajanagar were present.