ಪಾಕ್: ಪಾಕಿಸ್ತಾನದಲ್ಲಿ ಸಾರ್ವತ್ರಿಕ ಚುನಾವಣೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಇಡೀ ದೇಶದಲ್ಲಿ ಇಂದು ಮೊಬೈಲ್ ಸೇವೆಯನ್ನು ಸ್ಥಗಿತಗೊಳಿಸಲಾಗಿದೆ. ಮತದಾನ ಪ್ರಕ್ರಿಯೆಯು ಬೆಳಗ್ಗೆ 8 ರಿಂದ ಶುರುವಾಗಿದ್ದು ಸಂಜೆ 5 ರವರೆಗೆ ನಡೆಯುತ್ತದೆ.
ಪಾಕಿಸ್ತಾನದ ಎಲ್ಲಾ ಮತಗಟ್ಟೆಗಳಲ್ಲಿ 128 ಮಿಲಿಯನ್ಗಿಂತಲೂ ಹೆಚ್ಚು ಮತದಾರರು ಇದ್ದಾರೆ. ಈ ನಡುವೆ ಭದ್ರತೆಯ ದೃಷ್ಟಿಯಿಂದ ಈ ಕ್ರಮ ಕೈಗೊಳ್ಳಲಾಗಿದೆ. ಮತದಾನಕ್ಕೂ ಮುನ್ನ ಹಲವು ಭಯೋತ್ಪಾದಕ ಚಟುವಟಿಕೆಗಳಿಂದಾಗಿ ದೇಶದ ಭದ್ರತಾ ವಾತಾವರಣದಲ್ಲಿ ಭೀತಿ ಉಂಟಾಗಿತ್ತು.
ಹದಗೆಡುತ್ತಿರುವ ಭದ್ರತಾ ಪರಿಸ್ಥಿತಿಯ ದೃಷ್ಟಿಯಿಂದ ಮತ್ತು ಸಂಭಾವ್ಯ ಭದ್ರತಾ ಬೆದರಿಕೆಗಳನ್ನು ಕಡಿಮೆ ಮಾಡಲು, ಅದರ ವಿರುದ್ಧ ಕಠಿಣ ಕ್ರಮವನ್ನು ತೆಗೆದುಕೊಳ್ಳಲಾಗಿದೆ. ದೇಶಾದ್ಯಂತ ಮೊಬೈಲ್ ಸೇವೆಗಳನ್ನು ತಾತ್ಕಾಲಿಕವಾಗಿ ನಿಲ್ಲಿಸುವ ನಿರ್ಧಾರ ಕೈಗೊಳ್ಳಲಾಗಿದೆ. ಪಾಕಿಸ್ತಾನದ ಉಸ್ತುವಾರಿ ಆಂತರಿಕ ಸಚಿವಾಲಯವು ಸಾರ್ವತ್ರಿಕ ಚುನಾವಣೆಯ ಸಮಯದಲ್ಲಿ ಪಾಕಿಸ್ತಾನದ ಒಟ್ಟಾರೆ ಪರಿಸ್ಥಿತಿಯನ್ನು ಮೇಲ್ವಿಚಾರಣೆ ಮಾಡಲು ನಿಯಂತ್ರಣ ಕೊಠಡಿಯನ್ನು ಸ್ಥಾಪಿಸಿದೆ.
ಇನ್ನು ಪಾಕಿಸ್ತಾನ ಮುಸ್ಲಿಂ ಲೀಗ್-ನವಾಜ್ ಚುನಾವಣೆಯಲ್ಲಿ ಬಹುಮತ ಪಡೆದರೆ ನವಾಜ್ ಷರೀಫ್ ಪಕ್ಷದ ಪ್ರಧಾನಿ ಅಭ್ಯರ್ಥಿಯಾಗಲಿದ್ದಾರೆ ಎಂದು ಪಾಕಿಸ್ತಾನದ ಮಾಜಿ ಪ್ರಧಾನಿ ಶೆಹಬಾಜ್ ಷರೀಫ್ ಹೇಳಿದ್ದಾರೆ. ಪಾಕಿಸ್ತಾನದ ಚುನಾವಣಾ ಆಯೋಗ (ECP) ಪ್ರಕಾರ, 12.85 ಕೋಟಿಗೂ ಹೆಚ್ಚು ನೋಂದಾಯಿತ ಮತದಾರರು ಸಾರ್ವತ್ರಿಕ ಚುನಾವಣೆಯಲ್ಲಿ ತಮ್ಮ ಹಕ್ಕು ಚಲಾಯಿಸಲಿದ್ದಾರೆ. ಪ್ರಕ್ಷುಬ್ಧ ಬಲೂಚಿಸ್ತಾನದಲ್ಲಿ ಹೆಚ್ಚಿನ ನಿಗಾ ಇರಿಸಲಾಗಿದೆ.