ಪುದುಚೇರಿ: ಪುದುಚೇರಿಯಲ್ಲಿ ಕಾಟನ್ ಕ್ಯಾಂಡಿಯನ್ನು ನಿಷೇಧಿಸಲಾಗಿದೆ. ಕಾರಣ ಏನು ಗೊತ್ತಾ? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ, ಕಾಟನ್ ಕ್ಯಾಂಡಿ ತಯಾರಿಕೆಯಲ್ಲಿ ವಿಷಕಾರಿ ರಾಸಾಯನಿಕವನ್ನು ಬಳಸಿರುವುದನ್ನು ಸರ್ಕಾರಿ ಅಧಿಕಾರಿಗಳು ಪತ್ತೆ ಹಚ್ಚಿದ ನಂತರ ಅದರ ಮಾರಾಟವನ್ನು ನಿಷೇಧಿಸಲಾಗಿದೆ. ಪುದುಚೇರಿ ಲೆಫ್ಟಿನೆಂಟ್ ಗವರ್ನರ್ ತಮಿಳಿಸೈ ಸೌಂದರರಾಜನ್ ಅವರು ಗುರುವಾರ ಸಾಮಾಜಿಕ ಜಾಲತಾಣದಲ್ಲಿ ವೀಡಿಯೊವನ್ನು ಹಂಚಿಕೊಂಡು ನಿಷೇಧವನ್ನು ಘೋಷಿಸಿದ್ದಾರೆ.
ಈ ಕ್ಯಾಂಡಿಯಲ್ಲಿರುವ ರಾಸಾಯನಿಕ ಆಂಶಗಳು ಮಕ್ಕಳ ಆರೋಗ್ಯವನ್ನು ಹಾನಿ ಮಾಡುತ್ತದೆ. ವಿಷಕಾರಿ ವಸ್ತುವಾದ ರೋಡಮೈನ್-ಬಿ ಎಂಬ ಅಂಶವಿರುವುದನ್ನು ಆಹಾರ ಸುರಕ್ಷತಾ ಅಧಿಕಾರಿಗಳು ಪತ್ತೆ ಮಾಡಿದ್ದಾರೆ.