ಇಬ್ಬರು ಮಹಿಳೆಯರ ಬಂಧನ – News Karnataka Kannada (ನ್ಯೂಸ್ ಕರ್ನಾಟಕ ಕನ್ನಡ)

ಚಿಕ್ಕಬಳ್ಳಾಪುರ: ಒಳ ಉಡುಪಿನಲ್ಲಿ ಚಿನ್ನವನ್ನು ಅಡಗಿಸಿಟ್ಟುಕೊಂಡು ಸಾಗಿಸುತ್ತಿದ್ದ ಇಬ್ಬರು ಮಹಿಳೆಯರನ್ನು ಕೆಂಪೇಗೌಡ ಏರ್ಪೋಟ್ ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದಾರೆ.

ಇಬ್ಬರು ಮಹಿಳೆಯರು ಇಂಡಿಗೋ 6E1486 ವಿಮಾನದಲ್ಲಿ ನಿನ್ನೆ ರಾತ್ರಿ ದುಬೈನಿಂದ ಬೆಂಗಳೂರಿಗೆ ಬಂದಿದ್ದಾರೆ. ಅಕ್ರಮ ಚಿನ್ನ ಸಾಗಾಟಕ್ಕೆಂದು ಹಲವು ಲೇಯರ್​ಗಳ ಒಳ ಉಡುಪು ಧರಿಸಿಕೊಂಡು ಕೆಂಪೇಗೌಡ ಏರ್ಪೋರ್ಟ್​ಗೆ ಕಾಲಿಟ್ಟಿದ್ದಾರೆ. ಆದರೆ ಏರ್ಪೋಟ್ ಕಸ್ಟಮ್ಸ್ ಅಧಿಕಾರಿಗಳ ಕೈಗೆ ಖತರ್ನಾಕ್ ಮಹಿಳೆಯರು ಸಿಕ್ಕಿಬಿದ್ದಿದ್ದಾರೆ.

ಸದ್ಯ ಬಂಧಿತರಿಂದ ಸುಮಾರು 49 ಲಕ್ಷ 52 ಸಾವಿರ ಮೌಲ್ಯದ 717 ಗ್ರಾಂ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ. ಕಸ್ಟಮ್ಸ್ ಅಧಿಕಾರಿಗಳು ಇಬ್ಬರು ಮಹಿಳೆಯರನ್ನ ವಶಕ್ಕೆ ಪಡೆದುಕೊಂಡು ತನಿಖೆ ನಡೆಸುತ್ತಿದ್ದಾರೆ.

Font Awesome Icons

Leave a Reply

Your email address will not be published. Required fields are marked *