ಇರಾನ್​​ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಮೊಹಮ್ಮದ್ ಮೊಖ್ಬರ್

ಇರಾನ್: ಇರಾನ್ ಅಧ್ಯಕ್ಷ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​ ಭಾನುವಾರ ಪತನಗೊಂಡಿದ್ದು, ಇಬ್ರಾಹಿಂ ರೈಸಿ ಸಜೀವದಹನವಾಗಿದ್ದಾರೆ. ಹೀಗಾಗಿ ಇದೀಗ ಇಬ್ರಾಹಿಂ ರೈಸಿ ಸಾವಿನ ನಂತರ ಇರಾನ್​​ನಲ್ಲಿ ಆಡಳಿತ ಚುಕ್ಕಾಣಿಯನ್ನು ಉಪಾಧ್ಯಕ್ಷ ಮೊಹಮ್ಮದ್ ಮೊಖ್ಬರ್ ಅವರು ವಹಿಸಿಕೊಂಡಿದ್ದಾರೆ.

ಇರಾನ್​​ ಸಂವಿಧಾನದ ಪ್ರಕಾರ ಅಧ್ಯಕ್ಷರು ಸಾವನ್ನಪ್ಪಿದರೆ, ಅವರ ನಂತರ ಉಪಧ್ಯಾಕ್ಷರು ಅಲ್ಲಿ ಮುಂದುವರಿಯುತ್ತಾರೆ. ಇನ್ನು ಈ ಹೆಲಿಕಾಪ್ಟರ್​ ಭಾನುವಾರ ಪತನಗೊಂಡಿದ್ದು, ಇದರಲ್ಲಿ ಅಧ್ಯಕ್ಷ ಇಬ್ರಾಹಿಂ ರೈಸಿ ಸೇರಿದಂತೆ ಎಲ್ಲರೂ ಮೃತಪಟ್ಟಿರುವುದಾಗಿ ಇರಾನ್‌ ಮಾಧ್ಯಮಗಳು ವರದಿ ಮಾಡಿವೆ.

ಉಪಾಧ್ಯಕ್ಷ ಮೊಹಮ್ಮದ್ ಮೊಖ್ಬರ್ ಅವರು ಇಬ್ರಾಹಿಂ ರೈಸಿ ಅವರೊಂದಿಗೆ ನಿಕಟ ಸಂಬಂಧವನ್ನು ಹೊಂದಿದ್ದು, ಆಡಳಿತದಲ್ಲಿ ಗಮನಾರ್ಹ ಕೆಲಸವನ್ನು ಮಾಡಿದ್ದಾರೆ. ಹಾಗೂ ರಾಜಕೀಯ ಅನುಭವನ್ನು ಹೊಂದಿದ್ದಾರೆ. ಈ ಹಿಂದೆ ಅವರು ಸರ್ಕಾರಿ ಸ್ವಾಮ್ಯದ ಸೆಟಾಡ್‌ನ ಮುಖ್ಯಸ್ಥರಾಗಿದ್ದರು. ಹಾಗೂ ಅಂತರರಾಷ್ಟ್ರೀಯ ಕಾನೂನು ಮತ್ತು ನಿರ್ವಹಣೆಯಲ್ಲಿ ಉನ್ನತ ಪದವಿಗಳನ್ನು ಪಡೆದಿದ್ದಾರೆ.

ಮೊಹಮ್ಮದ್ ಮೊಖ್ಬರ್ ಅವರು ಇರಾನ್‌ನ ರಾಜಕೀಯ ಮತ್ತು ಆರ್ಥಿಕ ಕ್ಷೇತ್ರಗಳಲ್ಲಿ ಬಗ್ಗೆ ಆಳವಾಗಿ ತಿಳಿದುಕೊಂಡಿದ್ದಾರೆ. 2021ರಲ್ಲಿ ಇರಾನ್​​ ಮೊದಲ ಉಪಾಧ್ಯಕ್ಷರಾಗಿ ನೇಮಕಗೊಂಡರು. ಇದು ಇರಾನ್​​ ಇತಿಹಾಸಲ್ಲೇ ಮೊದಲು. 1979 ರ ಇಸ್ಲಾಮಿಕ್ ಕ್ರಾಂತಿಯ ನಂತರ ಮುಟ್ಟುಗೋಲು ಹಾಕಿಕೊಂಡ ಆಸ್ತಿಗಳನ್ನು ನಿರ್ವಹಿಸಲು ರಚಿಸಲಾದ ಸೆಟಾಡ್‌ನಲ್ಲಿ ಮುಖ್ಯಸ್ಥರಾಗಿ ಕೆಲಸ ಮಾಡಿದ್ದಾರೆ.

 

Font Awesome Icons

Leave a Reply

Your email address will not be published. Required fields are marked *