ದೆಹಲಿ: ಖ್ಯಾತ ಸಂಗೀತ ನಿರ್ದೇಶಕ ಇಳೆಯರಾಜ ಅವರ ಜೀವನದ ಕುರಿತು ಸಿನಿಮಾ ತಯಾರಾಗುತ್ತಿದೆ . ಈ ಬಗ್ಗೆ ನಿರ್ಮಾಣ ಸಂಸ್ಥೆಯಿಂದ ಹೊಸ ಸುದ್ದಿ ಹೊರಬಿದ್ದಿದೆ. ಏನೆಂದರೆ, ಇಳೆಯರಾಜ ಅವರ ಪಾತ್ರವನ್ನು ಖ್ಯಾತ ಕಾಲಿವುಡ್ ನಟ ಧನುಷ್ ಅವರು ಮಾಡಲಿದ್ದಾರೆ.
ಈ ಪ್ರಾಜೆಕ್ಟ್ ಅನೌನ್ಸ್ ಆಗುತ್ತಿದ್ದಂತೆಯೇ ಇಳೆಯರಾಜ ಮತ್ತು ಧನುಷ್ ಅವರು ಜೊತೆಯಾಗಿ ಇರುವ ಫೋಟೋಗಳು ವೈರಲ್ ಆಗಿವೆ. ಟ್ರೇಡ್ ಅನಲಿಸ್ಟ್ ಮನೋಬಲ ವಿಜಯಬಾಲನ್ ಅವರು ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಾರೆ.
ಭಾರತೀಯ ಚಿತ್ರರಂಗಕ್ಕೆ ಇಳೆಯರಾಜ ಅವರು ನೀಡಿದ ಕೊಡುಗೆ ಅಪಾರ. 7 ಸಾವಿರಕ್ಕೂ ಅಧಿಕ ಹಾಡುಗಳಿಗೆ ಅವರು ಸಂಗೀತ ಸಂಯೋಜನೆ ಮಾಡಿ, 1 ಸಾವಿರಕ್ಕೂ ಹೆಚ್ಚು ಸಿನಿಮಾಗಳಿಗೆ ಅವರು ಸಂಗೀತ ನಿರ್ದೇಶಕನಾಗಿ ಕೆಲಸ ಮಾಡಿದ್ದಾರೆ. ಇಂಥ ಮಹಾನ್ ಸಾಧಕನ ಜೀವನದ ವಿವರಗಳನ್ನು ಆಧರಿಸಿ ಈ ಸಿನಿಮಾ ನಿರ್ಮಾಣ ಆಗುತ್ತಿದ್ದು, ಸಾಕಷ್ಟು ನಿರೀಕ್ಷೆ ಹುಟ್ಟುಹಾಕಿದೆ.
‘ಇಸೈಗ್ನಾನಿ’ ಎಂದು ಈ ಸಿನಿಮಾಗೆ ಶೀರ್ಷಿಕೆ ಇಡಲಾಗಿದೆ ಎಂದು ಹೇಳಲಾಗುತ್ತಿದೆ. ಆದರೆ ಆ ಬಗ್ಗೆ ಇನ್ನಷ್ಟೇ ಅಧಿಕೃತ ಮಾಹಿತಿ ಹೊರಬೀಳಬೇಕಿದೆ.
ಧನುಷ್ ಅವರನ್ನು ಇಳೆಯರಾಜ ಅವರ ಪಾತ್ರದಲ್ಲಿ ನೋಡಲು ಫ್ಯಾನ್ಸ್ ಕಾತರರಾಗಿದ್ದಾರೆ. ಮರ್ಕ್ಯುರಿ ಮೂವೀಸ್ ಮತ್ತು ಕನೆಕ್ಟ್ ಮೀಡಿಯಾ ಸಂಸ್ಥೆಗಳು ಜೊತೆಯಾಗಿ ಈ ಸಿನಿಮಾವನ್ನು ನಿರ್ಮಾಣ ಮಾಡಲಿವೆ.
Filming for the much-anticipated Official Biopic based on the life and times of the Music Maestro, Isaignani #ILAIYARAAJA with the very versatile and talented #Dhanush portraying the legendary composer on screen to commence on October 2024.
Film will… pic.twitter.com/9sS8n4NfVc
— Manobala Vijayabalan (@ManobalaV) November 10, 2023