ಉಡುಪಿ: ಉಡುಪಿ ಜಿಲ್ಲೆಯ ಗ್ರಾಮ ಪಂಚಾಯತ್ಗಳಲ್ಲಿ ಸದಸ್ಯರ ರಾಜೀನಾಮೆ, ನಿಧನ ಮುಂತಾದ ಕಾರಣಗಳಿಂದ ಆಕಸ್ಮಿಕವಾಗಿ ತೆರವಾಗಿರುವ ಸದಸ್ಯ ಸ್ಥಾನಗಳಿಗೆ ಉಪಚುನಾವಣೆ ಮೂಲಕ ಭರ್ತಿ ಮಾಡಲು ಕುಂದಾಪುರ ತಾಲೂಕಿನ 35-ಅಮಾಸೆಬೈಲು ಗ್ರಾಮ ಪಂಚಾಯತಿಯ 1 ಸ್ಥಾನ, ಬ್ರಹ್ಮಾವರ ತಾಲೂಕಿನ ಕೋಟ ಗ್ರಾಮ ಪಂಚಾಯತಿಯ 1 ಸ್ಥಾನ,
ಉಡುಪಿ ತಾಲೂಕಿನ ಬೊಮ್ಮರ ಬೆಟ್ಟು ಗ್ರಾಮ ಪಂಚಾಯಿತಿಯ 1 ಸ್ಥಾನ, 13-ಕೊಡಿಬೆಟ್ಟು ಗ್ರಾಮ ಪಂಚಾಯಿತಿಯ 1 ಸ್ಥಾನ, ಕಾರ್ಕಳ ತಾಲೂಕಿನ ಈದು ಗ್ರಾಮ ಪಂಚಾಯಿತಿಯ 1 ಸ್ಥಾನ, ನಲ್ಲೂರು ಗ್ರಾಮ ಪಂಚಾಯಿತಿಯ 1 ಸ್ಥಾನ, ನಿಟ್ಟೆ ಗ್ರಾಮ ಪಂಚಾಯಿತಿಯ 1 ಸ್ಥಾನ, ನೀರೆ ಗ್ರಾಮ ಪಂಚಾಯತಿಯ 3 ಸ್ಥಾನ, 5-ಕೆರ್ವಾಶೆ ಗ್ರಾಮ ಪಂಚಾಯತಿಯ 1 ಸ್ಥಾನ ಹಾಗೂ ಕಡ್ತಲ ಗ್ರಾಮ ಪಂಚಾಯತಿಯ 1 ಸದಸ್ಯ ಸ್ಥಾನಗಳಿಗೆ ಉಪಚುನಾವಣೆ ವೇಳಾಪಟ್ಟಿಯನ್ನು ನಿಗದಿಪಡಿಸಿ ರಾಜ್ಯ ಚುನಾವಣಾ ಆಯೋಗ ಆದೇಶಿಸಿದೆ.
ನಾಮಪತ್ರ ಸಲ್ಲಿಸಲು 2024 ರ ನವೆಂಬರ್ 6 ರಿಂದ ಪ್ರಾರಂಭವಾಗಲಿದ್ದು, ನವೆಂಬರ್ 12 ನಾಮಪತ್ರಗಳನ್ನು ಸಲ್ಲಿಸಲು ಕೊನೆಯ ದಿನ. ನವೆಂಬರ್ 13 ರಂದು ನಾಮಪತ್ರಗಳನ್ನು ಪರಿಶೀಲನೆ ನಡೆಯಲಿದೆ. ನವೆಂಬರ್ 15 ರಂದು ಉಮೇದುವಾರಿಕೆಗಳನ್ನು ಹಿಂತೆಗೆದುಕೊಳ್ಳುವ ಕೊನೆಯ ದಿನವಾಗಿದೆ.
ಮತದಾನ ಅವಶ್ಯವಿದ್ದರೆ ನವೆಂಬರ್ 23ರ ಶನಿವಾರದಂದು ಮತದಾನವು ಬೆಳಗ್ಗೆ 7 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ನಡೆಯಲಿದೆ. ಮರು ಮತದಾನ ಅವಶ್ಯವಿದ್ದರೆ ಮರು ಮತದಾನವನ್ನು ನವೆಂಬರ್ 25 ರಂದು ಬೆಳಗ್ಗೆ 7 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ನಡೆಯಲಿದೆ. ಮತ ಎಣಿಕೆಯು ನವೆಂಬರ್ 26 ರಂದು ಬೆಳಗ್ಗೆ 8 ಗಂಟೆಯಿಂದ ತಾಲ್ಲೂಕಿನ ಕೇಂದ್ರ ಸ್ಥಳಗಳಲ್ಲಿ ನಡೆಯಲಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.