ಉಡುಪಿ ಪ್ರಥಮ, ದಕ್ಷಿಣ ಕನ್ನಡ ದ್ವಿತೀಯ – News Karnataka Kannada (ನ್ಯೂಸ್ ಕರ್ನಾಟಕ ಕನ್ನಡ)

ಬೆಂಗಳೂರು : ಇಂದು 2023-24 ನೇ ಸಾಲಿನ SSLC ಪರೀಕ್ಷೆ ಫಲಿತಾಂಶ ಹೊರಬಿದ್ದಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಪತ್ರಿಕಾಗೋಷ್ಠಿ ನಡೆಸುವ ಮೂಲಕ ಫಲಿತಾಂಶವನ್ನು ಪ್ರಕಟಿಸಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಅಧ್ಯಕ್ಷೆ ಮಂಜುಶ್ರೀಯವರು ಈ ಬಾರಿಯ ಎಸ್ಎಸ್ಎಲ್ಸಿ ಫಲಿತಾಂಶವನ್ನು ಪ್ರಕಟಿಸಿದ್ದಾರೆ.

ಇನ್ನೂ ಪತ್ರಿಕಾಗೋಷ್ಠಿಯಲ್ಲಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ನಿರ್ದೇಶಕ ಗೋಪಾಲಕೃಷ್ಣ ಮತ್ತು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾದ ರಿತೇಶ್ ಕುಮಾರ್ ಸಿಂಗ್ಇದ್ದರು.

ಈ ಬಾರಿ 8.69 ಲಕ್ಷ ವಿದ್ಯಾರ್ಥಿಗಳು ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದಿದ್ದಾರೆ. 4,41,910 ಬಾಲಕರು ಮತ್ತು 4,28,058 ವಿದ್ಯಾರ್ಥಿನಿಯರು ಪರೀಕ್ಷೆ ಬರೆದಿದ್ದಾರೆ. ಹೊರಬಿದ್ದ ಫಲಿತಾಂಶದಂತೆ ಈ ಬಾರಿ ಉಡುಪಿ ಜಿಲ್ಲೆ ಪ್ರಥಮ ಸ್ಥಾನ ಪಡೆದಿದೆ. ದಕ್ಷಿಣ ಕನ್ನಡ ದ್ವಿತೀಯ ಸ್ಥಾನ ಬಂದಿದೆ. ಶಿಕ್ಷಣ ಸಚಿವ ಮಧು ಬಂಗಾರಪ್ಪರವರ ತವರು ಜಿಲ್ಲೆ ಶಿವಮೊಗ್ಗ 3ನೇ ಸ್ಥಾನ ಪಡೆದಿದೆ. ಈ ಬಾರಿ 8.59,967 ಲಕ್ಷ ವಿಧ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 6,31,204 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ.

Font Awesome Icons

Leave a Reply

Your email address will not be published. Required fields are marked *