ನವದೆಹಲಿ : ‘ಎಸ್ಐಎಮ್ಐ’ ಸಂಘಟನೆಗೆ ಕೇಂದ್ರ ಸರ್ಕಾರ ಬಿಗ್ ಶಾಕ್ ನೀಡಿದ್ದು, ಮತ್ತೆ 5 ವರ್ಷ ನಿಷೇಧ ವಿಸ್ತರಣೆ ಮಾಡಿದೆ. ಸ್ಟೂಡೆಂಟ್ಸ್ ಇಸ್ಲಾಮಿಕ್ ಮೂವ್ಮೆಂಟ್ ಆಫ್ ಇಂಡಿಯಾ (ಸಿಮಿ) ಮೇಲಿನ ನಿಷೇಧವನ್ನು ಮೋದಿ ಸರ್ಕಾರ ಸೋಮವಾರ ಯುಎಪಿಎ ಅಡಿಯಲ್ಲಿ ಐದು ವರ್ಷಗಳವರೆಗೆ ವಿಸ್ತರಿಸಿದೆ. ದೇಶದಲ್ಲಿ ಸರಣಿ ಭಯೋತ್ಪಾದಕ ಕೃತ್ಯಗಳಲ್ಲಿ ಭಾಗಿಯಾಗಿದೆ ಎಂದು ಹೇಳಲಾದ ಸಿಮಿಯನ್ನು 2019 ರಲ್ಲಿ ಸರ್ಕಾರ ಇನ್ನೂ ಐದು ವರ್ಷಗಳ ಕಾಲ ನಿಷೇಧಿಸಿತ್ತು.
“ಭಯೋತ್ಪಾದನೆಯ ವಿರುದ್ಧ ಶೂನ್ಯ ಸಹಿಷ್ಣುತೆಯ ಪ್ರಧಾನಿ @narendramodi ಜಿ ಅವರ ದೃಷ್ಟಿಕೋನವನ್ನು ಬಲಪಡಿಸಲು ‘ಸ್ಟೂಡೆಂಟ್ಸ್ ಇಸ್ಲಾಮಿಕ್ ಮೂವ್ಮೆಂಟ್ ಆಫ್ ಇಂಡಿಯಾ (ಸಿಮಿ)’ ಅನ್ನು ಯುಎಪಿಎ ಅಡಿಯಲ್ಲಿ ಇನ್ನೂ ಐದು ವರ್ಷಗಳ ಅವಧಿಗೆ ‘ಕಾನೂನುಬಾಹಿರ ಸಂಘಟನೆ’ ಎಂದು ಘೋಷಿಸಲಾಗಿದೆ.
ಭಾರತದ ಸಾರ್ವಭೌಮತ್ವ, ಭದ್ರತೆ ಮತ್ತು ಸಮಗ್ರತೆಗೆ ಬೆದರಿಕೆಯೊಡ್ಡಲು ಭಯೋತ್ಪಾದನೆಯನ್ನು ಪ್ರಚೋದಿಸುವಲ್ಲಿ, ಶಾಂತಿ ಮತ್ತು ಕೋಮು ಸೌಹಾರ್ದತೆಯನ್ನು ಭಂಗಗೊಳಿಸುವಲ್ಲಿ ಸಿಮಿ ಭಾಗಿಯಾಗಿದೆ ಎಂದು ಗೃಹ ಸಚಿವಾಲಯದ ಪೋಸ್ಟ್ ನಲ್ಲಿ ತಿಳಿಸಲಾಗಿದೆ.