ಬಿಲಾಸ್ಪುರ: ಎಂಬಿಬಿಎಸ್ ವಿದ್ಯಾರ್ಥಿಯೊಬ್ಬ ಏಮ್ಸ್ನ ನಾಲ್ಕನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಿಮಾಚಲಪ್ರದೇಶದ ಬಿಲಾಸ್ಪುರದಲ್ಲಿ ನಡೆದಿದೆ. ಮೃತ, ಎಂಬಿಬಿಎಸ್ ಎರಡನೇ ವರ್ಷದ ವಿದ್ಯಾರ್ಥಿಯಾಗಿದ್ದಾನೆ. ಪೊಲೀಸರು ಮೃತದೇಹವನ್ನು ವಶಕ್ಕೆ ಪಡೆದು ಮುಂದಿನ ಕ್ರಮ ಕೈಗೊಂಡಿದ್ದಾರೆ. ಆದರೆ ವಿದ್ಯಾರ್ಥಿ ಆತ್ಮಹತ್ಯೆ ಹಿಂದಿರುವ ನಿಖರ ಕಾರಣ ತಿಳಿದುಬಂದಿಲ್ಲ.
ಮೃತ ವಿದ್ಯಾರ್ಥಿಯನ್ನು ಮಧ್ಯಪ್ರದೇಶದ ಇಂದೋರ್ ನಿವಾಸಿ ಎಕೆ ಲೇಖಿ ಅವರ ಪುತ್ರ ಪರೀಕ್ಷಿತ್ (21) ಎಂದು ಗುರುತಿಸಲಾಗಿದೆ. ಮಾಹಿತಿ ತಿಳಿದ ಕೂಡಲೇ ಪೊಲೀಸರು ಕೂಡ ಸ್ಥಳಕ್ಕೆ ಆಗಮಿಸಿದ್ದರು. ಘಟನಾ ಸ್ಥಳಕ್ಕೆ ಜಿಲ್ಲಾ ಡಿಎಸ್ಪಿ ಮದನ್ ಧೀಮಾನ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಘಟನೆಗೆ ಕಾರಣಗಳು ಇನ್ನೂ ತಿಳಿದುಬಂದಿಲ್ಲ.