ಕರ್ನಾಟಕದ ಯುವ ಅಥ್ಲೀಟ್ ಶ್ರೀಯಾ ರಾಜೇಶ್ ದುಬೈನಲ್ಲಿ ನಡೆಯುತ್ತಿರುವ ಏಷ್ಯನ್ 20 ವಯೋಮಿತಿಯ ಅಥ್ಲೆಟಿಕ್ಸ್ ಚಾಂಪಿಯನ್ಷಿಪ್ನ ಮೂರನೇ ದಿನವಾದ ಶುಕ್ರವಾರ ಮಹಿಳೆಯರ 400 ಮೀಟರ್ ಹರ್ಡಲ್ಸ್ನಲ್ಲಿ ಕಂಚಿನ ಪದಕ ಗೆದ್ದುಕೊಂಡಿದ್ದಾರೆ. ಅವರು 59.20 ಸೆಕೆಂಡ್ಗಳಲ್ಲಿ ಸ್ಪರ್ಧೆ ಮುಗಿಸುವ ಮೂಲಕ ಈ ಸಾಧನೆ ಮಾಡಿದರು.
Source