ನವದೆಹಲಿ,ಸೆಪ್ಟಂಬರ್,18,2024 (www.justkannada.in): ಒಂದು ರಾಷ್ಟ್ರ ಒಂದು ಚುನಾವಣೆ ಕುರಿತ ರಾಮನಾಥ್ ಕೋವಿಂದ್ ಸಮಿತಿ ವರದಿಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ.
ಇಂದು ಪ್ರಧಾನಿ ಮೋದಿ ನೇತೃತ್ವದಲ್ಲಿ ನಡೆದ ಕೇಂದ್ರ ಸಚಿವ ಸಂಪುಟದಲ್ಲಿ ಒಂದು ರಾಷ್ಟ್ರ, ಒಂದು ಚುನಾವಣೆ ಪ್ರಸ್ತಾವನೆಗೆ ಒಪ್ಪಿಗೆ ಸಿಕ್ಕಿದೆ. ಇತ್ತೀಚೆಗಷ್ಟೇ ನಡೆದ ಲೋಕಸಭೆ ಚುನಾವಣೆಗೂ ಮುನ್ನ ಬಿಜೆಪಿ ಹೊರಡಿಸಿದ್ದ ಪ್ರಣಾಳಿಕೆಯಲ್ಲಿ ‘ಒಂದು ದೇಶ, ಒಂದು ಚುನಾವಣೆ’ ಎಂಬುದನ್ನೂ ಪ್ರಮುಖ ಭರವಸೆಯಾಗಿ ಸೇರಿಸಲಾಗಿತ್ತು.
ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರ ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ಸಮಿತಿ ರಚನೆ ಮಾಡಲಾಗಿತ್ತು. ಈ ಬಗ್ಗೆ ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ನೇತೃತ್ವದ ಸಮಿತಿಯು ಮಾರ್ಚ್‌ನಲ್ಲಿ ಒಂದು ರಾಷ್ಟ್ರ ಒಂದು ಚುನಾವಣೆಯ ಸಾಧ್ಯತೆಗಳ ಕುರಿತು ತನ್ನ ವರದಿಯನ್ನು ಸಲ್ಲಿಸಿತ್ತು. ಈ ವರದಿಗೆ ಮೋದಿ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ.
Key words: Union Cabinet, approves, report, One Nation One Election