ಗುರುಗ್ರಾಮ್ : ಕೋಣೆಯೊಂದರಲ್ಲಿ ಬೆಂಕಿ ಅವಘಡ ಸಂಭವಿಸಿ ನಾಲ್ವರು ಮೃತಪಟ್ಟಿರುವ ಘಟನೆ ಗುರುಗ್ರಾಮದ ಸರಸ್ವತಿ ಎನ್ಪ್ಲೇವ್ನಲ್ಲಿ ನಡೆದಿದೆ. ಮೃತರನ್ನು ಅಮನ್ (17), ಸಾಹಿಲ್ (22), ನೂರ್ ಆಲಂ (27), ಮತ್ತು ಮೊಹಮ್ಮದ್ ಮುಸ್ತಾಕ್ (28) ಎಂದು ಗುರುತಿಸಲಾಗಿದೆ.
ಮೃತರು ಬಿಹಾರದ ನಿವಾಸಿಗಳಾಗಿದ್ದು, ಬಾಡಿಗೆ ಮನೆಯ ಕೋಣೆಯಲ್ಲಿ ಒಟ್ಟಿಗೆ ವಾಸಿಸುತ್ತಿದ್ದರು. ಅಮನ್ 10ನೇ ತರಗತಿ ವಿದ್ಯಾರ್ಥಿಯಾಗಿದ್ದು, ಇತರರು ಗಾರ್ಮೆಂಟ್ ರಫ್ತು ಕಂಪನಿಯಲ್ಲಿ ಟೈಲರ್ಗಳಾಗಿ ಕೆಲಸ ಮಾಡುತ್ತಿದ್ದರು.
ಅಗ್ನಿ ಅವಘಡಕ್ಕೂ ಮುನ್ನ ನಾಲ್ವರು ಒಂದೇ ಕೋಣೆಯಲ್ಲಿ ಮಲಗಿದ್ದರು. ಈ ವೇಳೆ ಏಕಾಏಕಿ ಹೊಗೆ ಕಾಣಿಸಿಕೊಂಡು ಕೋಣೆಗೆ ಬೆಂಕಿ ತಗುಲಿದೆ. ಪರಿಣಾಮ ನಾಲ್ವರು ಬೆಂಕಿಗೆ ಆಹುತಿಯಾಗಿದ್ದಾರೆ. ಘಟನೆ ಸಂದರ್ಭದಲ್ಲಿ ಕುಟುಂಬದ ಇತರ ಸದಸ್ಯರು ಪಕ್ಕದ ಕೋಣೆಯಲ್ಲಿದ್ದರು ಎನ್ನಲಾಗಿದೆ. ಶಾರ್ಟ್ ಸರ್ಕ್ಯೂಟ್ ನಿಂದಾಗಿ ಈ ಘಟನೆ ಸಂಭವಿಸಿರಬಹುದೆಂದು ಪೊಲೀಸರು ಶಂಕಿಸಿದ್ದಾರೆ.