ನವದೆಹಲಿ: ಬೇಹುಗಾರಿಕೆ ಆರೋಪದಲ್ಲಿ ಜೈಲು ಶಿಕ್ಷೆಗೆ ಗುರಿಯಾಗಿದ್ದ ದಹ್ರಾ ಗ್ಲೋಬಲ್ ಕಂಪನಿಯಲ್ಲಿ ಕೆಲಸ ಮಾಡುತ್ತಿರುವ 8 ಮಂದಿ ಭಾರತೀಯ ನೌಕಾಪಡೆಯ ಮಾಜಿ ಅಧಿಕಾರಿಗಳು ಕತಾರ್ನಿಂದ ಭಾರತಕ್ಕೆ ಮರಳಿದ್ದಾರೆ.
ಕತಾರ್ ನ್ಯಾಯಾಲಯವು ಸೋಮವಾರ ತನ್ನ ವಶದಲ್ಲಿದ್ದ ಎಲ್ಲಾ 8 ನೌಕಾಪಡೆಯ ಮಾಜಿ ಅಧಿಕಾರಿಗಳನ್ನು ಬಿಡುಗಡೆ ಮಾಡಿದೆ. ಅದರಲ್ಲಿ 7 ಮಂದಿ ಭಾರತಕ್ಕೆ ಮರಳಿದ್ದಾರೆ ಎಂದು ವಿದೇಶಾಂಗ ಸಚಿವಾಲಯ ಮಾಹಿತಿ ನೀಡಿದೆ.
ಕತಾರ್‌ನಲ್ಲಿ ಬಂಧಿತರಾಗಿರುವ ದಹ್ರಾ ಗ್ಲೋಬಲ್ ಕಂಪನಿಯಲ್ಲಿ ಕೆಲಸ ಮಾಡುತ್ತಿರುವ ಎಂಟು ಭಾರತೀಯ ಪ್ರಜೆಗಳ ಬಿಡುಗಡೆಯನ್ನು ಭಾರತ ಸರ್ಕಾರ ಸ್ವಾಗತಿಸುತ್ತದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಹೇಳಿದೆ.
ಭಾರತಕ್ಕೆ ಮರಳಿದ ಮಾಜಿ ನೌಕಾಪಡೆಯ ಅಧಿಕಾರಿಯೊಬ್ಬರು ಪ್ರಧಾನಿ ನರೇಂದ್ರ ಮೋದಿಯವರ ಮಧ್ಯಸ್ಥಿಕೆ ಇಲ್ಲದೆ ಅವರ ಬಿಡುಗಡೆ ಸಾಧ್ಯವಿಲ್ಲ ಎಂದು ಹೇಳಿದ್ದಾರೆ.
ದೆಹಲಿ ವಿಮಾನ ನಿಲ್ದಾಣದಲ್ಲಿ ಬಂದಿಳಿದ ಬಳಿಕ ‘ಭಾರತ್ ಮಾತಾ ಕಿ ಜೈ’ ಘೋಷಣೆಗಳನ್ನು ಕೂಗಿದರು. ಎಲ್ಲಾ ಮಾಜಿ ಅಧಿಕಾರಿಗಳು ಪ್ರಧಾನಿ ಮೋದಿ ಮತ್ತು ಕತಾರ್ ಎಮಿರ್ ಅವರಿಗೆ ಧನ್ಯವಾದಗಳನ್ನು ಅರ್ಪಿಸಿದರು.
ಕಳೆದ ವರ್ಷ ಅಕ್ಟೋಬರ್ 27 ರಂದು ಕತಾರ್ ನ್ಯಾಯಾಲಯವು ಎಂಟು ಮಾಜಿ ಭಾರತೀಯ ನೌಕಾಪಡೆಯ ಉದ್ಯೋಗಿಗಳಿಗೆ ಮರಣದಂಡನೆ ವಿಧಿಸಿತ್ತು.
ಎಲ್ಲಾ ಮಾಜಿ ಅಧಿಕಾರಿಗಳು ಭಾರತೀಯ ನೌಕಾಪಡೆಗೆ 20 ವರ್ಷಗಳ ವಿಶಿಷ್ಟ ಸೇವೆಯನ್ನು ನೀಡಿದ್ದಾರೆ.
ಕತಾರ್ ನ್ಯಾಯಾಲಯವು ಶಿಕ್ಷೆ ವಿಧಿಸಿದ ಎಂಟು ಜನರು ಮಾಜಿ ಭಾರತೀಯ ನೌಕಾಪಡೆಯ ಅಧಿಕಾರಿಗಳು: ಕಮಾಂಡರ್ ಪೂರ್ಣೇಂದು ತಿವಾರಿ, ಕಮಾಂಡರ್ ಸುಗುಣಾಕರ್ ಪಾಕಳ, ಕಮಾಂಡರ್ ಅಮಿತ್ ನಾಗ್ಪಾಲ್, ಕಮಾಂಡರ್ ಸಂಜೀವ್ ಗುಪ್ತಾ, ಕ್ಯಾಪ್ಟನ್ ನವತೇಜ್ ಸಿಂಗ್ ಗಿಲ್, ಕ್ಯಾಪ್ಟನ್ ಬೀರೇಂದ್ರ ಕುಮಾರ್ ವರ್ಮಾ, ಕ್ಯಾಪ್ಟನ್ ಸೌರಭ್ ವಶಿಷ್ಠ, ನಾವಿಕ ರಾಗೇಶ್ ಗೋಪಕುಮಾರ್.
#WATCH | Delhi: Qatar released the eight Indian ex-Navy veterans who were in its custody; seven of them have returned to India. pic.twitter.com/yuYVx5N8zR
— ANI (@ANI) February 12, 2024