ಮಂಗಳೂರು: ಬೊಳ್ಳಿ ಮೂವೀಸ್ ಹಾಗೂ ಅವಿಕಾ ಪ್ರೊಡಕ್ಷನ್ಸ್ ನಿರ್ಮಾಣದ ತೆಲಿಕೆದ ಬೊಳ್ಳಿ ಡಾ. ದೇವದಾಸ್ ಕಾಪಿಕಾಡ್ ಕಥೆ, ಚಿತ್ರಕಥೆ, ಸಂಭಾಷಣೆ, ಸಾಹಿತ್ಯ ಬರೆದು, ಅರ್ಜುನ್ ಕಾಪಿಕಾಡ್ ನಿರ್ದೇಶನದ ಚೊಚ್ಚಲ ಸಿನಿಮಾ ರಾಪಟ ಶುಕ್ರವಾರ ಮುಂಜಾನೆ ಕರಾಳಿಯಾದ್ಯಂತ ಅದ್ಧೂರಿಯಾಗಿ ಬಿಡುಗಡೆಗೊಂಡಿತು.
ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ ಮಾತಾಡಿದ ಡಾ. ದೇವದಾಸ್ ಕಾಪಿಕಾಡ್ ಅವರು, “ತುಳು ಭಾಷೆಯಲ್ಲಿ ಬರುವ ಎಲ್ಲಾ ಸಿನಿಮಾಗಳಿಗೂ ತುಳುವರು ಪ್ರೋತ್ಸಾಹಿಸಬೇಕು. ತುಳುವರಿಗೆ ಒಂದು ಉತ್ತಮ ಗುಣಮಟ್ಟದ ಸಿನಿಮಾ ನೀಡಬೇಕು ಎಂಬ ಉದ್ದೇಶದಿಂದ ರಾಪಟ ಸಿನಿಮಾ ಮಾಡಿದ್ದೇವೆ. ಎಲ್ಲರೂ ಪ್ರೀತಿಯಿಟ್ಟು ಸಿನಿಮಾ ಥಿಯೇಟರ್ ಬಂದು ಸಿನಿಮಾ ನೋಡಿದರೆ ನಮ್ಮ ಪ್ರಯತ್ನ ಸಾರ್ಥಕ” ಎಂದರು.
ಬಳಿಕ ಮಾತಾಡಿದ ಹರೀಶ್ ಶೇರಿಗಾರ್ ಅವರು, “ಒಳ್ಳೆಯ ಸಿನಿಮಾಗಳನ್ನು ಖಂಡಿತಾ ತುಳುವರು ಪ್ರೋತ್ಸಾಹಿಸುತ್ತಾರೆ. ರಾಪಟ ಸಿನಿಮಾವನ್ನು ದುಬೈಯಲ್ಲಿ ನೋಡಿದ್ದೇನೆ. ಸಿನಿಮಾ ಚೆನ್ನಾಗಿದ್ದು ಎಲ್ಲರೂ ಸಿನಿಮಾ ನೋಡಿ” ಎಂದರು.
ವೇದಿಕೆಯಲ್ಲಿ ಶರ್ಮಿಳಾ ಕಾಪಿಕಾಡ್, ಚಿತ್ರ ನಿರ್ದೇಶಕ ಅರ್ಜುನ್ ಕಾಪಿಕಾಡ್, ಕಾರ್ಪೋರೇಟರ್ ಕಿರಣ್ ಕೋಡಿಕಲ್, ಚಿತ್ರ ವಿತರಕ ಸಚಿನ್ ಎ.ಎಸ್. ಉಪ್ಪಿನಂಗಡಿ, , ಕೆಮರಾ ಮ್ಯಾನ್ ಸಚಿನ್ ಶೆಟ್ಟಿ, ಶನಿಲ್ ಗುರು, ಚಿತ್ರ ನಿರ್ಮಾಪಕ ಹರೀಶ್ ಶೇರಿಗಾರ್, ತುಳು ಚಲನ ಚಿತ್ರ ನಿರ್ಮಾಪಕರ ಸಂಘದ ಅಧ್ಯಕ್ಷ ಆರ್. ಧನರಾಜ್, ಭೋಜರಾಜ್ ವಾಮಂಜೂರ್, ಅನೂಪ್ ಸಾಗರ್, ನಿರೀಕ್ಷಾ ಶೆಟ್ಟಿ, ಕಾವ್ಯ ಅರ್ಜುನ್ ಕಾಪಿಕಾಡ್, ದಿವ್ಯಾ ಸಚಿನ್ ಶೆಟ್ಟಿ, ಅನಿಲ್ ರಾಜ್ ಉಪ್ಪಳ, ಯತೀಶ್ ಬೈಕಂಪಾಡಿ, ಪತ್ರಕರ್ತ ಬಾಳ ಜಗನ್ನಾಥ ಶೆಟ್ಟಿ, ಸಂತೋಷ್ ಸುವರ್ಣ, ಚಿತ್ರದ ನಿರ್ಮಾಪಕಿ ಆಶಿಕಾ ಸುವರ್ಣ, ದಿನೇಶ್ ಶೆಟ್ಟಿ, ಹರಿ, ಕಿಶೋರ್ ಕೊಟ್ಟಾರಿ, ಅಶ್ವಿಥ್ ಕೊಟ್ಟಾರಿ ಮತ್ತಿತರರು ಉಪಸ್ಥಿತರಿದ್ದರು. ಲಕ್ಷ್ಮೀಶ ಸುವರ್ಣ ಕಾರ್ಯಕ್ರಮ ನಿರ್ವಹಿಸಿದರು.
ಹಾಸ್ಯ ದಿಗ್ಗಜರ ಸಮ್ಮಿಲನ!
ತುಳುನಾಡಿನ ಹಾಸ್ಯ ದಿಗ್ಗಜರು “ರಾಪಟ” ಚಿತ್ರದಲ್ಲಿ ನಟಿಸಿದ್ದು, ತಾಂತ್ರಿಕ ವಿಭಾಗದಲ್ಲೂ ಅನುಭವಿ ತಂಡ ಕೆಲಸ ಮಾಡಿದೆ. ಸಂಪೂರ್ಣ ಹಾಸ್ಯ ಮನರಂಜನೆಯ ರಾಪಟ ಸಿನಿಮಾದಲ್ಲಿ ಉತ್ತಮ ಕತೆ ಇದೆ. ಅರ್ಜುನ್ ಕಾಪಿಕಾಡ್ ನಿರ್ದೇಶನದ ಸಿನಿಮಾದಲ್ಲಿ ಖ್ಯಾತ ಕಲಾವಿದರು ಅಭಿನಯಿಸಿದ್ದಾರೆ. ಅನೂಪ್ ಸಾಗರ್ ನಾಯಕ ನಟನಾಗಿ ಹಾಗೂ ನಿರೀಕ್ಷ ಶೆಟ್ಟಿ ನಾಯಕಿಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ತುಳು ಚಿತ್ರ ರಂಗದ ದಿಗ್ಗಜರಾದ ದೇವದಾಸ್ ಕಾಪಿಕಾಡ್, ಅರವಿಂದ ಬೋಳಾರ್, ಭೋಜರಾಜ್ ವಾಮಂಜೂರು, ಸಾಯಿ ಕೃಷ್ಣ ಕುಡ್ಲ, ದೀಪಕ್ ರೈ ಪಾಣಾಜೆ, ರೂಪಶ್ರೀ ವರ್ಕಾಡಿ , ಪ್ರಕಾಶ್ ತೂಮಿನಾಡು, ವಿಕೀಶಾ, ರವಿರಾಮ ಕುಂಜ ಮುಂತಾದವರು ನಟಿಸಿದ್ದು, ಸಹ ನಿರ್ದೇಶಕರಾಗಿ ಶನಿಲ್ ಗುರು, ಸಿನಿಮಾಟೋಗ್ರಾಫರ್ ರಾಗಿ ಸಚಿನ್ ಎಸ್.ಶೆಟ್ಟಿ, ಎಕ್ಸಿಕ್ಯೂಟಿವ್ ಪ್ರೊಡ್ಯೂಸರ್ ಸಂದೀಪ್ ಶೆಟ್ಟಿ, ಎಡಿಟರ್ ಯಶ್ವಿನ್.ಕೆ. ಶೆಟ್ಟಿಗಾರ್, ಸಂಗೀತ ಪ್ರಸಾದ್.ಕೆ. ಶೆಟ್ಟಿ, ನಿರ್ಮಾಪಕರಾಗಿ ಸಂತೋಷ್ ಸುವರ್ಣ, ಸೂರ್ಯಕಾಂತ್ ಸುವರ್ಣ, ರಾಜನ್ ರಾಕೇಶ್ ಶೆಟ್ಟಿ, ಆಶಿಕಾ ಸುವರ್ಣ, ದೇವಿಕಾ ಆಚಾರ್ಯ, ಶೈಲರಾಜ್ ಪೂಜಾರಿ, ಅಭಿಶೆಟ್ಟಿ, ಮನೋಜ್ಶೆಟ್ಟಿ, ಯಕ್ಷಿತ್ ಶೆಟ್ಟಿ, ಮಧು ಕುಮಾರ್ ಕಾರ್ಯನಿರ್ವಹಿಸಿದ್ದಾರೆ. ರಾಪಟ ತುಳು ಸಿನಿಮಾ ಸೆಪ್ಟೆಂಬರ್ 9 ಮತ್ತು 10ರಂದು ಯುಎಇ, ಸೆ. 15ರಂದು ಬಹರೈನ್, ಸೆ.22ರಂದು ಮಸ್ಕತ್, ಸೆ.29ರಂದು ಕತಾರ್ನಲ್ಲಿ ಪ್ರೀಮಿಯರ್ ಶೋ ನಡೆದಿದ್ದು, ಸಿನಿಪ್ರೇಕ್ಷಕರಿಂದ ಮೆಚ್ಚುಗೆ ಪಡೆದುಕೊಂಡಿದೆ.