ಕರ್ನಾಟಕಕ್ಕೆ ಏನು ಮಾಡಿದ್ದಾರೆ ಎಂದು ರಾಜ್ಯದ ಜನತೆಗೆ ಮೋದಿ ಉತ್ತರಿಸಲಿ-ಸಿಎಂ ಸಿದ್ದರಾಮಯ್ಯ ಆಗ್ರಹ. » Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್


ಮೈಸೂರು, ಏಪ್ರಿಲ್,13,2024 (www.justkannada.in) : ಪ್ರಧಾನಿ ಮೋದಿಯವರು ನಾಳೆ ಮೈಸೂರಿಗೆ ಆಗಮಿಸುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ ಸಿದ್ದರಾಮಯ್ಯ, ಮೋದಿಯವರು ಬಂದು ಹೋಗಲು ನನ್ನದೇನೂ ತಕರಾರಿಲ್ಲ. ಕರ್ನಾಟಕಕ್ಕೆ ಏನು ಮಾಡಿದ್ದಾರೆ ಎಂದು ರಾಜ್ಯದ ಜನತೆಗೆ ಹೇಳಬೇಕು. ನಿರುದ್ಯೋಗ, ತೆರಿಗೆ ಹಂಚಿಕೆ, ಬರಗಾಲಕ್ಕೆ ಇಂದಿನವರೆಗೂ ಯಾಕೆ ಪರಿಹಾರ ನೀಡಿಲ್ಲ ಎಂಬುದಕ್ಕೆಲ್ಲಾ ಉತ್ತರ ಹೇಳಲಿ ಎಂದು ಆಗ್ರಹಿಸಿದರು.

ಇಂದು ಮೈಸೂರಿನ ತಮ್ಮ ನಿವಾಸದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಎನ್. ಡಿಎಗೆ ಪೂರ್ಣ ಬಹುಮತ ದೊರಕುವುದಿಲ್ಲ. ಬಿಜೆಪಿ ವಿರುದ್ಧವಿರುವ ಇಂಡಿಯಾ ಮೈತ್ರಿಗೆ ಬಹುಮತ ದೊರೆಯಲಿದೆ. 400 ಕ್ಕೂ ಹೆಚ್ಚು ಸ್ಥಾನಪಡೆಯುವುದಾಗಿ ಹೇಳಿಕೊಳ್ಳುತ್ತಿರುವ ಬಿಜೆಪಿಯದ್ದು ಜನರ ದಾರಿತಪ್ಪಿಸುವ  ಕಾರ್ಯತಂತ್ರ ಎಂದರು.

ಅನಂತಕುಮಾರ್ ಹೆಗಡೆ ಮೇಲೆ ಕ್ರಮ ಏಕಿಲ್ಲ

ಅಂಬೇಡ್ಕರ್ ಬಂದರೂ ಸಂವಿಧಾನ ಬದಲಿಸಲು ಸಾಧ್ಯವಿಲ್ಲ. ಬಿಜೆಪಿ ಸಂವಿಧಾನದ ಪರವಾಗಿದೆ ಎಂದು ಮೋದಿ ಹೇಳಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಹಾಗಾದರೆ ಅನಂತಕುಮಾರ್ ಹೆಗಡೆ ಮೇಲೆ ಕ್ರಮ ಯಾಕೆ ತೆಗೆದುಕೊಂಡಿಲ್ಲ. ಅವರನ್ನು ಪಕ್ಷದಿಂದ ಅಥವಾ ಮಂತ್ರಿ ಸ್ಥಾನದಿಂದ ಕೈಬಿಟ್ಟರೇ ಎಂದು ಪ್ರಶ್ನಿಸಿದರು. ಉತ್ತರ ಕರ್ನಾಟಕದಲ್ಲಿ ಐದು ವರ್ಷಗಳಿಂದ ಏನೂ ಕೆಲಸ ಮಾಡದೇ ಮನೆಯಲ್ಲಿ ಕುಳಿತಿದ್ದರು. ಕೊನೇ 3-4 ತಿಂಗಳು ಬಂದು ಸೋಲುವ ವರದಿಯಾಧಾರದ ಮೇಲೆ ಅನಂತಕುಮಾರ್ ಅವರಿಗೆ ಟಿಕೆಟ್ ಕೊಟ್ಟಿಲ್ಲ ಎಂದರು.

ಬಿಜೆಪಿ ಯಾವತ್ತೂ ಸಂವಿಧಾನದ ಪರವಾಗಿಲ್ಲ

ಬಿಜೆಪಿ ಯಾವತ್ತೂ ಸಂವಿಧಾನದ ಪರವಾಗಿಲ್ಲ. ಸಂವಿಧಾನ ಜಾರಿಯಾದಾಗ ಸಾವರ್ಕರ್ ಹಾಗೂ ಗೋಲ್ವಾಲ್ಕರ್  ಅವರು  ಭಾರತದ ಸಂವಿಧಾನವನ್ನು ವಿರೋಧಿಸಿದ್ದರು ಎಂದರು.

ಎನ್.ಐ.ಎ ಹಾಗೂ ಕರ್ನಾಟಕ ಪೊಲೀಸ್ ಕಾರ್ಯ ಶ್ಲಾಘನೀಯ

ರಾಮೇಶ್ವರ ಕಾಫೆ ಬಾಂಬ್ ಸ್ಫೋಟದ ಪ್ರಮುಖ ಆರೋಪಿಗಳನ್ನು ಬಂಧಿಸಿರುವ ಎನ್.ಐ. ಎ ತಂಡ ಮತ್ತು  ಕರ್ನಾಟಕ ಪೊಲೀಸರನ್ನು ಸಿಎಂ ಸಿದ್ದರಾಮಯ್ಯ ಶ್ಲಾಘಿಸಿದ್ದಾರೆ. ಆರೋಪಿಗಳನ್ನು ಕೋಲ್ಕತ್ತಾದಿಂದ ಬೆಂಗಳೂರಿಗೆ ಕರೆ ತಂದ ನಂತರ ವಿಚಾರಣೆ ಮಾಡಿ ಹೆಚ್ಚಿನ ವಿವರ ಪಡೆಯಲಾಗುವುದು ಎಂದರು.

Key words: PM, Modi, mysore, CM, Siddaramaiah

Font Awesome Icons

Leave a Reply

Your email address will not be published. Required fields are marked *