ಕರ್ನಾಟಕ ಹೈಕೋರ್ಟ್​ ಸಿಜೆ ಆಗಿ ಅಂಜಾರಿಯ ಪ್ರಮಾಣ ವಚನ ಸ್ವೀಕಾರ

ಬೆಂಗಳೂರು: ಕರ್ನಾಟಕ ಉಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿಗಳಾಗಿ ನ್ಯಾಯಮೂರ್ತಿ ನಿಲಯ್ ವಿಪಿನ್ ಚಂದ್ರ ಅಂಜಾರಿಯ ಪ್ರಮಾಣ ವಚನ ಸ್ವೀಕರಿಸಿದರು. ಇಂದು(ಫೆ.25) ರಾಜಭವನದ ಗಾಜಿನ ಮನೆಯಲ್ಲಿ ನಡೆದ ಸರಳ ಸಮಾರಂಭದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಮುಖ್ಯ ನ್ಯಾಯಮೂರ್ತಿ ಅಂಜಾರಿಯ ಅವರಿಗೆ ಗೌಪ್ಯತಾ ಪ್ರಮಾಣ ವಚನ ಬೋಧಿಸಿದರು.

ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಹೆಚ್.ಕೆ. ಪಾಟೀಲ್, ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ. ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಹಾಗೂ ವಿಧಾನ ಪರಿಷತ್ ಸದಸ್ಯ ಕೆ.ಗೋವಿಂದರಾಜ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

1965ರ ಮಾರ್ಚ್ 23ರಂದು ಅಹಮದಾಬಾದ್‌ನಲ್ಲಿ ಜನಿಸಿದ ಅಂಜಾರಿಯಾ 1988ರಲ್ಲಿ ಎ.ಎ. ಶಾ ಕಾನೂನು ಕಾಲೇಜಿನಿಂದ ಎಲ್‌ಎಲ್‌ಬಿ ಪದವಿ ಪಡೆದರು. ಆನಂತರ ವಕೀಲಿಕೆ ವೃತ್ತಿ ಕೈಗೊಂಡು ಸಿವಿಲ್‌, ಸಾಂವಿಧಾನಿಕ, ಕಂಪನಿ, ಕಾಮ್ಕಿ ಮತ್ತು ಸೇವಾ ವಿಷಯಗಳ ವ್ಯಾಜ್ಯಗಳನ್ನು ಮುನ್ನಡೆಸಿದ ಅನುಭವ ಸಂಪಾದಿಸಿದ್ದಾರೆ. ಅದಕ್ಕೂ ಮುನ್ನ ಅವರು ಗುಜರಾತ್‌ ಹೈಕೋರ್ಟ್‌ನಲ್ಲಿ ಸಿವಿಲ್‌ ಮತ್ತು ಸಾಂವಿಧಾನಿಕ ವಿಷಯಗಳಲ್ಲಿ ಪರಿಣಿತಿ ಹೊಂದಿದ್ದಾರೆ. 2011ರ ನವೆಂಬರ್ 21ರಿಂದ ಎನ್‌. ವಿ. ಅಂಜಾರಿಯಾ ಗುಜರಾತ್‌ ಹೈಕೋರ್ಟ್‌ ನ್ಯಾಯಮೂರ್ತಿಯಾಗಿ ಕಾರ್ಯನಿರ್ವಹಿಸಿದ್ದಾರೆ.

Font Awesome Icons

Leave a Reply

Your email address will not be published. Required fields are marked *