ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ ಮಾಜಿ ಸಚಿವ ಸುರೇಶ್ ಪಚೌರಿ

ಭೋಪಲ್: ಮಧ್ಯಪ್ರದೇಶದ ಮುಖ್ಯಮಂತ್ರಿ ಮೋಹನ್ ಯಾದವ್, ರಾಜ್ಯ ಬಿಜೆಪಿ ಅಧ್ಯಕ್ಷ ವಿಡಿ ಶರ್ಮಾ ಮತ್ತು ಮಾಜಿ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರ ಸಮ್ಮುಖದಲ್ಲಿ ಸುರೇಶ್ ಪಚೌರಿ ಸಂಸದ ಗಜೇಂದ್ರ ಸಿಂಗ್ ರಾಜುಖೇಡಿ ಮತ್ತು ಪಕ್ಷದ ಮಾಜಿ ಶಾಸಕರು ಕಾಂಗ್ರೆಸ್​​​ ತೊರೆದು ಭಾರತೀಯ ಜನತಾ ಪಕ್ಷಕ್ಕೆ ಬಂದಿದ್ದಾರೆ.

ಇಂದು ಬೆಳಿಗ್ಗೆ ಬಿಜೆಪಿಯ ಪ್ರಧಾನ ಕಚೇರಿಯಲ್ಲಿ ಬಿಜೆಪಿ ಪಕ್ಷವನ್ನು ಸೇರಿಸಿದ್ದಾರೆ.

ಗಾಂಧಿ ಕುಟುಂಬಕ್ಕೆ ನಿಕಟವರ್ತಿಯಾಗಿದ್ದ, ಪಚೌರಿ ಅವರು ಕಾಂಗ್ರೆಸ್​​​​ ಸರ್ಕಾರಲ್ಲಿ ರಕ್ಷಣಾ (ರಕ್ಷಣಾ ಉತ್ಪಾದನೆ ಮತ್ತು ಸರಬರಾಜು) ರಾಜ್ಯ ಸಚಿವರಾಗಿದ್ದರು ಮತ್ತು ಪಕ್ಷದಿಂದ ನಾಲ್ಕು ಬಾರಿ ರಾಜ್ಯಸಭಾ ಸದಸ್ಯರಾಗಿಯೂ ಆಯ್ಕೆಯಾಗಿದ್ದರು.

1998, 1999 ಮತ್ತು 2009ರ ಮೂರು ಅವಧಿಗೆ ಕಾಂಗ್ರೆಸ್​​​ನಿಂದ ಟಿಕೆಟ್‌ ಪಡೆದು, ಧಾರ್ (ಪರಿಶಿಷ್ಟ ಬುಡಕಟ್ಟುಗಳು) ಲೋಕಸಭಾ ಕ್ಷೇತ್ರದಿಂದ ಸಂಸದರಾಗಿ ಚುನಾಯಿತರಾದ ರಾಜುಖೇಡಿ ಅವರು ಪ್ರಮುಖ ಬುಡಕಟ್ಟು ನಾಯಕರಾಗಿದ್ದರು. ಕಾಂಗ್ರೆಸ್‌ಗೆ ಸೇರುವ ಮೊದಲು ಅವರು 1990 ರಲ್ಲಿ ಬಿಜೆಪಿ ಶಾಸಕರಾಗಿದ್ದರು.

 

Font Awesome Icons

Leave a Reply

Your email address will not be published. Required fields are marked *