ಹೈದರಾಬಾದ್: ಹಿಜಾಬ್‌ನಿಂದ ಆರಂಭಗೊಂಡ ಗದ್ದಲ ದೇಶವ್ಯಾಪಿ ಹರಡಿ ಕೋಲಾಹಲವನ್ನೇ ಸೃಷ್ಟಿಸಿದೆ. ಇದೀಗ ಹೈದರಾಬಾದ್‌ನ ಕೆವಿ ರಂಗಣ್ಣ ರೆಡ್ಡಿ ಮಹಿಳಾ ಪದವಿ ಕಾಲೇಜಿನಲ್ಲಿ ಮತ್ತೇ ಧರ್ಮ ದಂಗಲ್ ಜೋರಾಗುತ್ತಿದೆ. ಕಾಲೇಜಿನಲ್ಲಿ ನಮಾಜ್‌ಗೆ ಕಾಲೇಜು ಆಡಳಿತ ಮಂಡಳಿ ನಿರಾಕರಿಸಿದೆ. ಇದು ಮುಸ್ಲಿಮ್ ವಿದ್ಯಾರ್ಥಿನಿಯರನ್ನು ಕೆರಳಿಸಿದೆ. ಹೀಗಾಗಿ ಮುಸ್ಲಿಮ್ ವಿದ್ಯಾರ್ಥಿನಿಯರು ಕಾಲೇಜು ವಿರುದ್ದ ಭಾರಿ ಪ್ರತಿಭಟನೆ ನಡೆಸಿದ್ದಾರೆ.
ಇನ್ನು ಇಲ್ಲಿ ಮುಸ್ಲಿಮ್ ವಿದ್ಯಾರ್ಥಿನಿಯರ ಸಂಖ್ಯೆ ಹೆಚ್ಚಿದೆ. ಕಳೆದ ವರ್ಷ ಹಿಜಾಬ್ ಗದ್ದಲವೂ ಇಲ್ಲಿ ನಡೆದಿತ್ತು. ಇದೀಗ ಕಾಲೇಜು ತರಗತಿಗಳಲ್ಲಿ ಮುಸ್ಲಿಮ್ ವಿದ್ಯಾರ್ಥಿನಿಯರು ನಮಾಜ್ ಮಾಡಲು ಆರಂಭಿಸಿದ್ದಾರೆ. ಮುಸ್ಲಿಮ್ ವಿದ್ಯಾರ್ಥಿನಿಯರ ಈ ನಡೆಯನ್ನು ಕಾಲೇಜು ಆಡಳಿತ ಮಂಡಳಿ ವಿರೋಧಿಸಿದೆ. ಇಷ್ಟೇ ಅಲ್ಲ ನಮಾಜ್‌ಗೆ ಅವಕಾಶವಿಲ್ಲ ಎಂದು ಎಚ್ಚರಿಸಿದೆ.
ಆದರೆ ಮುಸ್ಲಿಮ್ ವಿದ್ಯಾರ್ಥಿನಿಯರು ಕಾಲೇಜು ತರಗತಿ, ಆವರಣದಲ್ಲಿ ನಮಾಜ್ ಮಾಡಿ ಆಡಳಿತ ಮಂಡಳಿಗೆ ಸೆಡ್ಡು ಹೊಡೆದಿದ್ದಾರೆ. ಇತ್ತ ಪೊಲೀಸರು ಮಧ್ಯಪ್ರವೇಶಿಸಿ ಪರಿಸ್ಥಿತಿ ತಿಳಿಗೊಳಿಸುವ ಪ್ರಯತ್ನ ಮಾಡಿದ್ದಾರೆ. ಈ ವೇಳೆ ನಮಾಜ್‌ಗೆ ಅನುಮತಿ ನೀಡಬೇಕು ಎಂದು ಮುಸ್ಲಿಮ್ ವಿದ್ಯಾರ್ಥಿನಿಯರು ಪಟ್ಟು ಹಿಡಿದಿದ್ದಾರೆ.