ಕಾಲೇಜು ವಿದ್ಯಾರ್ಥಿನಿಯೊಂದಿಗೆ ಸ್ವಾಮಿಯ ಸರಸ ಸಲ್ಲಾಪ; ವಿಡಿಯೋ ವೈರಲ್

ರಾಜಸ್ಥಾನ: ರಾಜಸ್ಥಾನದ ಪ್ರಮುಖ ಆಧ್ಯಾತ್ಮಿಕ ಗುರು ಬಾಬಾ ಬಾಲಕ್‍ನಾಥ್ ಅವರು ಕಾರಿನೊಳಗೆ ಕಾಲೇಜು ವಿದ್ಯಾರ್ಥಿನಿಯೊಂದಿಗೆ ಅನುಚಿತವಾಗಿ ವರ್ತಿಸುತ್ತಿರುವ ವಿಡಿಯೋವೊಂದು ವೈರಲ್ ಆಗಿದೆ.

ಕಾಲೇಜು ವಿದ್ಯಾರ್ಥಿನಿ ಒಂದು ವರ್ಷದ ಹಿಂದೆ ಖೇಡಿ ದಂತುಲ್ಜಾದ ಕ್ಷೇತ್ರಪಾಲ್ ದೇವಸ್ಥಾನದಲ್ಲಿ ತನ್ನ ಸಮಸ್ಯೆಗಳನ್ನು ಪರಿಹರಿಸಿಕೊಳ್ಳಲು ಬಾಬಾ ಬಾಲಕ್‍ನಾಥ್ ಅವರನ್ನು ಮೊದಲ ಬಾರಿಗೆ ಭೇಟಿಯಾಗಿದ್ದಾಳಂತೆ.

ತಂತ್ರ ಮತ್ತು ಮಂತ್ರ ವಿದ್ಯೆಗಳನ್ನು ಬಳಸಿಕೊಂಡು ಅವಳ ಸಮಸ್ಯೆಗಳನ್ನು ಪರಿಹರಿಸಬಹುದು ಎಂದು ಬಾಬಾ ಹೇಳಿದ್ದರು ಎನ್ನಲಾಗಿದೆ. ಆದರೆ ಸಮಸ್ಯೆಗೆ ಪರಿಹಾರ ನೀಡುವ ಬದಲು ಆಕೆಯ ಜೊತೆ ಅಸಭ್ಯವಾಗಿ ವರ್ತಿಸಿದ್ದಾರೆ ಎಂದು ಆರೋಪಿಸಲಾಗಿದೆ ಎಂದು ವರದಿಯಾಗಿದೆ.

ವಿಡಿಯೋ ವೈರಲ್ ಆದ ನಂತರ ಅಧಿಕಾರಿಗಳು ಬಾಬಾ ಬಾಲಕ್‍ನಾಥ್ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ. ಈ ಘಟನೆಯ ಬಗ್ಗೆ ವಿದ್ಯಾರ್ಥಿನಿ ಅತ್ಯಾಚಾರದ ಆರೋಪವನ್ನು ಹೊರಿಸಿದ್ದರಿಂದ ಈ ಪ್ರಕರಣವನ್ನು ಪೊಲೀಸರು ಗಂಭೀರವಾಗಿ ಪರಿಗಣಿಸಿದ್ದಾರೆ.

https://x.com/Rajasthan_Tak/status/1847634700774309926?

 

Font Awesome Icons

Leave a Reply

Your email address will not be published. Required fields are marked *