ಕಿರಿಯ ವೈದ್ಯರ ಬೇಡಿಕೆಗೆ ಸರ್ಕಾರದ ಮೌನ – ನ್ಯೂಸ್ ಕರ್ನಾಟಕ ಕನ್ನಡ (News Karnataka Kannada)

ಕೆಚ್ಚೆದೆಯ ಕಿರಿಯ ವೈದ್ಯರಿಗೆ ಯಾವುದೇ ಹಾನಿ ಉಂಟಾದರೆ ರಾಷ್ಟ್ರವ್ಯಾಪಿ ವೈದ್ಯಕೀಯ ಸೇವೆಗಳ ಸಂಪೂರ್ಣ ಸ್ಥಗಿತ ವನ್ನು ಘೋಷಿಸುವುದಾಗಿ ಅಖಿಲ ಭಾರತ ವೈದ್ಯಕೀಯ ಸಂಘಗಳ ಒಕ್ಕೂಟ ಎಚ್ಚರಿಕೆ ನೀಡಿದೆ.

ಆರ್ ಜಿ ಕಾರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಕೊಲೆಯಾದ ಸಹೋದ್ಯೋಗಿಗೆ ನ್ಯಾಯ ಒದಗಿಸಬೇಕು ಜೊತೆಗೆ ಸುರಕ್ಷಿತ ಕೆಲಸದ ವಾತಾವರಣ ಮತ್ತು ಇತರ ಪ್ರಮುಖ ಸಮಸ್ಯೆಗಳನ್ನು ಪರಿಹರಿಸಬೇಕೆಂದು ಧರಣಿ ನಿರತ ವೈದ್ಯರು ಒತ್ತಾಯಿಸುತ್ತಿದ್ದಾರೆ.

ಶುಕ್ರವಾರ IMA ರಾಷ್ಟ್ರೀಯ ಅಧ್ಯಕ್ಷ ಆರ್ ವಿ ಅಶೋಕನ್ ಉಪವಾಸ ನಿರತ ಕಿರಿಯ ವೈದ್ಯರನ್ನು ಭೇಟಿ ಮಾಡಿ ಸಮಸ್ಯೆಗಳನ್ನು ಆಲಿಸಿದರು. ಈ ಮಧ್ಯೆ ಫೋರ್ಟಿಸ್ ಆಸ್ಪತ್ರೆಯ ವೈದ್ಯರು ಅಕ್ಟೋಬರ್ 12 ರಿಂದ (ಶನಿವಾರ) ಎಲ್ಲಾ ತುರ್ತು ಸೇವೆಗಳನ್ನು ಸ್ಥಗಿತಗೊಳಿಸುವುದಾಗಿ ಹೇಳಿದ್ದಾರೆ.

ಕೊಲೆಯಾದ ತಮ್ಮ ಸಹೋದ್ಯೋಗಿಗೆ ನ್ಯಾಯ ದೊರಕಿಸಿಕೊಡಬೇಕು ಹಾಗೂ ಆರೋಗ್ಯ ಕಾರ್ಯದರ್ಶಿ ಎನ್ ಎಸ್ ನಿಗಮ್ ಅವರನ್ನು ಕೂಡಲೇ ವಜಾಗೊಳಿಸಬೇಕು ಎಂದು ಕಿರಿಯ ವೈದ್ಯರು ಆಗ್ರಹಿಸಿದ್ದಾರೆ. ಆಸ್ಪತ್ರೆಗಳಿಗೆ ಕೇಂದ್ರೀಕೃತ ರೆಫರಲ್ ವ್ಯವಸ್ಥೆ, ಆಸ್ಪತ್ರೆಗಳಲ್ಲಿ ಪೊಲೀಸ್ ರಕ್ಷಣೆ, ಮತ್ತು ಖಾಲಿ ಇರುವ ಆರೋಗ್ಯ ಸೇವಾ ಹುದ್ದೆಗಳ ತ್ವರಿತ ಭರ್ತಿಗೆ ಕಿರಿಯ ವೈದ್ಯರ ಇನ್ನಿತರ ಬೇಡಿಕೆಗಳಾಗಿವೆ. ಆಗಸ್ಟ್ 9 ರಂದು ಮಹಿಳಾ ಟ್ರೈನಿ ವೈದ್ಯೆಯ ಅತ್ಯಾಚಾರ ಮತ್ತು ಕೊಲೆಯ ನಂತರ ವೈದ್ಯರು ಪ್ರತಿಭಟನೆ ಆರಂಭಿಸಿದ್ದರು. ಆದರೆ ಸರ್ಕಾರದ ಭರವಸೆ ನಂತರ ಸೆಪ್ಟೆಂಬರ್ 21 ರಂದು ತಮ್ಮ 42 ದಿನಗಳ ಮುಷ್ಕರವನ್ನು ಅಂತ್ಯಗೊಳಿಸಿದ್ದರು. ಬೇಡಿಕೆ ಈಡೇರದ ಹಿನ್ನೆಲೆಯಲ್ಲಿ ಈಗ ಅನಿರ್ದಿಷ್ಟ ಉಪವಾಸ ಸತ್ಯಾಗ್ರಹವನ್ನು ಮುಂದುವರೆಸಿದ್ದಾರೆ.

Font Awesome Icons

Leave a Reply

Your email address will not be published. Required fields are marked *