ನವದೆಹಲಿ: ಮಧ್ಯಪ್ರದೇಶದ ‘ಕುನೊ’ ರಾಷ್ಟ್ರೀಯ ಉದ್ಯಾನವನದಲ್ಲಿ ನಮೀಬಿಯಾದ ಮತ್ತೊಂದು ಚೀತಾ ಮೃತಪಟ್ಟಿದೆ. ಸಾವಿಗೆ ನಿಜವಾದ ಕಾರಣ ಇನ್ನೂ ತಿಳಿದುಬಂದಿಲ್ಲ ಮತ್ತು ಮರಣೋತ್ತರ ಪರೀಕ್ಷೆಯ ನಂತರ ನಿಖರ ಕಾರಣ ತಿಳಿದುಬರಲಿದೆ.
ಇಂದು ಬೆಳಗ್ಗೆಯಿಂದಲೇ ಮಂಕಾಗಿದ್ದ ಚೀತಾ ಶೌರ್ಯ 3:17 ರ ವೇಳೆಗೆ ಮೃತಪಟ್ಟಿತು ಎಂದು ಹೇಳಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಬೆಳಗ್ಗೆ 11 ಗಂಟೆಯಿಂದ ನಿತ್ರಾಣ ಸ್ಥಿತಿಯಲ್ಲಿದ್ದ ಚೀತಾವನ್ನು ನಿಗಾವಣಾ ತಂಡ ಗಮನಿಸಿತ್ತು. ನಂತರ ಸ್ವಲ್ಪ ಹೊತ್ತಿನ ನಂತರ ಚೇತರಿಸಿಕೊಂಡಿತಾದರೂ ಚೀತಾ ನಡುಗುತ್ತಿತ್ತು, 3:17 ರ ವೇಳೆಗೆ ಮೃತಪಟ್ಟಿತು ಎಂದು ಅಧಿಕಾರಿಗಳು ಹೇಳಿದ್ದಾರೆ.