ಕೃಷಿ ಹೊಂಡಕ್ಕೆ ಬಿದ್ದು 6 ವರ್ಷದ ಮಗು ದಾರುಣ ಸಾವು

ವಿಜಯಪುರ:  ಆಟವಾಡುತ್ತಿದ್ದಾಗ ಆಕಸ್ಮಿಕವಾಗಿ ಬಾಲಕನೊಬ್ಬ ಕೃಷಿ ಹೊಂಡದಲ್ಲಿ ಬಿದ್ದು ಸಾವನ್ನಪ್ಪಿರೋ ಘಟನೆ ಬಸವನಬಾಗೇವಾಡಿ ತಾಲೂಕಿನ ನರಸಲಗಿ ಗ್ರಾಮದಲ್ಲಿ ನಡೆದಿದೆ. ಖುಷಾಲ್ ಹಾಲ್ಯಾಳ (6) ಮೃತ ಬಾಲಕ.

ಮೃತ ಬಾಲಕ ಜಮೀನಿನಲ್ಲಿ ಆಟವಾಡುತ್ತಿದ್ದಾಗ ಆಕಸ್ಮಿಕವಾಗಿ ಕೃಷಿ ಹೊಂಡಕ್ಕೆ ಬಿದ್ದಿದ್ದಾನೆ. ಆದ್ರೆ, ಮೇಲೆ ಬರಲು ಆಗದೇ ಕೃಷಿ ಹೊಂಡದಲ್ಲೇ ಮೃತಪಟ್ಟಿದ್ದಾನೆ. ಈ ಘಟನೆ ಬಸವನಬಾಗೇವಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮಗುವನ್ನು ಕಳೆದುಕೊಂಡು ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.

Font Awesome Icons

Leave a Reply

Your email address will not be published. Required fields are marked *