ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಅಧಿಕಾರಿಗಳು ವಿದೇಶದಿಂದ ಅಕ್ರಮವಾಗಿ 10 ಹಳದಿ ಬಣ್ಣದ ಅನಕೊಂಡ ಹಾವುಗಳನ್ನು ಸಾಗಾಣೆ ಮಾಡುತ್ತಿದ್ದ ಪ್ರಯಾಣಿಕನನ್ನು ಬಂಧಿಸಿದ್ದಾರೆ.
ಬ್ಯಾಂಕಾಕ್ನಿಂದ ಕೆಐಎ ವಿಮಾನ ನಿಲ್ದಾಣಕ್ಕೆ ಬಂದಿದ್ದ ಪ್ರಯಾಣಿಕರ ಲಗೇಜ್ಗಳನ್ನು ಕಸ್ಟಮ್ಸ್ ಅಧಿಕಾರಿಗಳು ತಪಾಸಣೆ ಮಾಡುತ್ತಿದ್ದರು. ಈ ವೇಳೆ ಪ್ರಯಾಣಿಕನೊಬ್ಬನ ಲಗೇಜ್ ತಪಾಸಣೆ ಮಾಡುವಾಗ 10 ಹಳದಿ ಅನಕೊಂಡ ಪತ್ತೆಯಾಗಿವೆ.
ಕೂಡಲೇ ಅಧಿಕಾರಿಗಳು ಪ್ರಯಾಣಿಕನನ್ನ ವಶಕ್ಕೆ ಪಡೆದಿದ್ದು, ಕಸ್ಟಮ್ಸ್ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ. ವನ್ಯಜೀವಿಗಳ ಕಳ್ಳಸಾಗಣೆ ಮಾಡಿದ ಆರೋಪದಡಿ ಆರೋಪಿಯ ವಿರುದ್ಧ ಪ್ರಕರಣ ದಾಖಲಾಗಿದೆ.
ಕಸ್ಟಮ್ಸ್ ಅಧಿಕಾರಿಗಳು ತನಿಖೆ ಮುಂದುವರೆಸಿದ್ದಾರೆ. ಅಧಿಕಾರಿಗಳು ಹಳದಿ ಬಣ್ಣ ಆನಕೊಂಡ ಹಾವುಗಳನ್ನು ರಕ್ಷಿಸಿ, ಅರಣ್ಯ ಇಲಾಖೆ ಅಧಿಕಾರಿಗಳಿಗೆ ವಶಕ್ಕೆ ನೀಡಿದ್ದಾರೆ.