ಮೈಸೂರು: ಹೊಸವರ್ಷದ ಆಚರಣೆ ಹಿನ್ನೆಲೆಯಲ್ಲಿ ಕೆಎಂಪಿಕೆ ಟ್ರಸ್ಟ್ ವತಿಯಿಂದ ನಗರದ ಸರಸ್ವತಿ ಪುರಂನಲ್ಲಿರುವ ಸಾನಿಧ್ಯ ವೃದ್ಧಾಶ್ರಮದ ನಿರಾಶ್ರಿತರಿಗೆ ಹೊದಿಕೆಯನ್ನು ವಿತರಿಸಲಾಯಿತು.
ಈ ವೇಳೆ ಮಾತನಾಡಿದ ಮೈಸೂರು ನಗರ ಮತ್ತು ಜಿಲ್ಲಾ ಬ್ರಾಹ್ಮಣ ಸಂಘದ ಅಧ್ಯಕ್ಷ ಡಿ.ಟಿ.ಪ್ರಕಾಶ್ ಅವರು ಕೆಎಂಪಿಕೆ ಟ್ರಸ್ಟ್ ಸದಸ್ಯರು ಈಗಾಗಲೇ ಹತ್ತು ದಿನಗಳ ಕಾಲ ಪ್ರತಿದಿನ ರಾತ್ರಿ ಮೈಸೂರು ನಗರದ ಕೆಲವು ಪ್ರದೇಶಗಳಿಗೆ ಭೇಟಿ ನೀಡಿ ಫುಟ್ ಪಾತ್ ಹಾಗೂ ಲಾರಿ ಕೆಳಗಡೆ ಜೀವನ ಸಾಗಿಸುತ್ತಿರುವ ನಿರಾಶ್ರಿತರಿಗೆ ಹೊದಿಕೆ ನೀಡಿ ಮಾನವೀಯತೆ ಮೆರೆದಿದ್ದಾರೆ.
ಇತ್ತೀಚಿನ ದಿನಗಳಲ್ಲಿ ಯುವಕರು ಪಾಶ್ಚಾತ್ಯ ಸಂಸ್ಕೃತಿಗೆ ಮಾರು ಹೋಗಿ ಮೋಜು ಮಸ್ತಿ ಮಾಡಲು ಸ್ನೇಹಿತರೊಡನೆ ಮೈಮರೆತು ಮದ್ಯಪಾನ ಮಾಡಿ ಕುಣಿದು ಕುಪ್ಪಳಿಸುವ ಇಂತಹ ಸಂದರ್ಭದಲ್ಲೂ ನಿರಾಶ್ರಿತರಿಗೆ ಹೊದಿಕೆ ವಿತರಿಸುವ ಮೂಲಕ ಹೊಸ ವರ್ಷವನ್ನು ಅರ್ಥಪೂರ್ಣವಾಗಿ ಆಚರಿಸಿ ಸಮಾಜಕ್ಕೆ ಸಂದೇಶ ನೀಡಿರುವುದು ಶ್ಲಾಘನೀಯ ಎಂದರು.
ಸಮಾಜಸೇವಕ ಕೆ.ರಘುರಾಂ ವಾಜಪೇಯಿ ಮಾತನಾಡಿ ಹವಾಮಾನ ಏರುಪೇರು, ತಂಡಿ ಶೀತಗಾಳಿ ಹೆಚ್ಚಿರುವ ಹಿನ್ನಲೆಯಲ್ಲಿ ಅಶಕ್ತರು ನಿರಾಶ್ರಿತರಿಗೆ ನೆರವಾಗಲು ಹೊದಿಕೆ ನೀಡುತ್ತಿರುವುದು ಅರ್ಥಪೂರ್ಣವಾಗಿದೆ, ನಗರ ಮಟ್ಟದಲ್ಲಿ ವೃದ್ದಾಶ್ರಮಗಳಿಗೆ ಸರ್ಕಾರಗಳು ತೆರಿಗೆ ವಿನಾಯಿತಿ, ಉಚಿತ ವಿದ್ಯುತ್ ನೀರು ಪೊರೈಕೆ ಸಹಾಯಧನ ಸೌಲಭ್ಯಗಳು ನೀಡಲು ಮುಂದಾಗಬೇಕು ಎಂದರು.
ಇದೇ ಸಂದರ್ಭದಲ್ಲಿ ಜೀವದಾರ ರಕ್ತ ನಿಧಿ ಕೇಂದ್ರದ ನಿರ್ದೇಶಕ ಗಿರೀಶ್, ಕಡಕೋಳ ಜಗದೀಶ್, ಕೆಎಂಪಿಗೆ ಟ್ರಸ್ಟ್ ಅಧ್ಯಕ್ಷ ವಿಕ್ರಮ ಅಯ್ಯಂಗಾರ್, ಅಜಯ್ ಶಾಸ್ತ್ರಿ, ಬೈರತಿ ಲಿಂಗರಾಜು, ಸುಚೇಂದ್ರ, ರಂಗನಾಥ್ ,ಚಕ್ರಪಾಣಿ, ಹಾಗೂ ಇನ್ನಿತರರು ಹಾಜರಿದ್ದರು.