ಕೆರೆಯಲ್ಲಿ ಈಜಲು ಹೋದ ಇಬ್ಬರು ಬಾಲಕರು ನೀರಲ್ಲಿ ಮುಳುಗಿ ಸಾವು

ಬಾಗಲಕೋಟೆ: ಬನಹಟ್ಟಿ ಪಟ್ಟಣದಲ್ಲಿ ಕೆರೆಯಲ್ಲಿ ಈಜಲು ಹೋದ ಇಬ್ಬರು ಬಾಲಕರು ನೀರಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ನಡೆದಿದೆ.

ಸಂಜಯ್ ತಳವಾರ್ (12), ಸಮರ್ಥ್ ತಳವಾರ್ (12) ಮೃತ ಮಕ್ಕಳು.

ಕೆಲ ದಿನಗಳಿಂದ ಮಳೆಯಾಗುತ್ತಿರುವ ಕಾರಣ ಬನಹಟ್ಟಿ ಕೆರೆಯಲ್ಲಿ ನೀರು ತುಂಬಿತ್ತು.  ಇಂದು ಬೆಳಿಗ್ಗೆ 9 ಗಂಟೆಗೆ ಇಬ್ಬರು ಕೆರೆಯಲ್ಲಿ ಈಜಲು ಹೋಗಿದ್ದರು. ಕೆರೆಯಲ್ಲಿ ನೀರು ಜಾಸ್ತಿ ಇದ್ದ ಕಾರಣ ನೀರಿನಲ್ಲಿ ಮುಳುಗಿ ಇಬ್ಬರು ಸಾವನ್ನಪ್ಪಿದ್ದಾರೆ.

ನೀರಿನಲ್ಲಿದ್ದ ಬಾಲಕರ ಶವವನ್ನು ಸ್ಥಳೀಯ ಈಜುಗಾರರು ಹಾಗೂ ಅಗ್ನಿ ಶಾಮಕ ಸಿಬ್ಬಂದಿ ಹೊರ ತೆಗೆದಿದ್ದಾರೆ.

Font Awesome Icons

Leave a Reply

Your email address will not be published. Required fields are marked *