ಕೆಲವರಿಗೋಸ್ಕರ ಶಕ್ತಿ ಯೋಜನೆ ಪರಿಷ್ಕರಣೆ ಮಾಡಲ್ಲ-ಸಚಿವ ರಾಮಲಿಂಗರೆಡ್ಡಿ » Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್


ಬೆಂಗಳೂರು,ಅಕ್ಟೋಬರ್,31,2024 (www.justkannada.in):  ಶಕ್ತಿ ಯೋಜನೆ ಮರುಪರಿಶೀಲನೆ ಬಗ್ಗೆ ಮಾಧ್ಯಮಗಳಲ್ಲಿ ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ ಈ ಕುರಿತು ಸಾರಿಗೆ ಸಚಿವ ರಾಮಲಿಂಗರೆಡ್ಡಿ ಸ್ಪಷ್ಟನೆ ನೀಡಿದ್ದಾರೆ.

ಈ ಕುರಿತು ಮಾತನಾಡಿರುವ ಸಚಿವ ರಾಮಲಿಂಗರೆಡ್ಡಿ, ಕೆಲವರಿಗೋಸ್ಕರ ಶಕ್ತಿಯೋಜನೆ ಪರಿಷ್ಕರಣೆ ಮಾಡಲ್ಲ.  ಬೆಂಜ್ ಕಾರಿನಲ್ಲಿ ಓಡಾಡುವವರು ಡಿಸಿಎಂ ಡಿಕೆ ಶಿವಕುಮಾರ್ ಗೆ ಆ ರೀತಿ ಹೇಳಿದ್ದಾರೆ.  ಡಿಸಿಎಂ ಡಿಕೆ ಶಿವಕುಮಾರ್ ಬಳಿ  ಟಿಕೆಟ್ ಹಣ ನೀಡ್ತೇವೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಆದರೆ ಅವರಿಗೋಸ್ಕರ ಶಕ್ತಿ ಯೋಜನೆ ನಿಲ್ಲಿಸಲ್ಲ ಎಂದರು.

ಶಕ್ತಿ ಯೋಜನೆ ಪರಿಷ್ಕರಣೆ ಬಗ್ಗೆ ಚರ್ಚೆಯಾಗಿಲ್ಲ- ಗೃಹ ಸಚಿವ ಡಾ.ಜಿ.ಪರಮೇಶ್ವರ್

ಈ ಕುರಿತು ಪ್ರತಿಕ್ರಿಯಿಸಿರುವ ಗೃಹ ಸಚಿವ ಡಾ.ಜಿ.ಪರಮೇಶ್ವರ್,  ಶಕ್ತಿಯೋಜನೆ ಪರಿಷ್ಕರಣೆ ಬಗ್ಗೆ ಚರ್ಚೆಯಾಗಿಲ್ಲ. ಶಕ್ತಿಯೋಜನೆ ಬಗ್ಗೆ ಸರ್ಕಾರ ತೀರ್ಮಾನಿಸಲ್ಲ ಎಂದು ತಿಳಿಸಿದರು.

Key words: Shakti Yojana, not, revised, Minister, Ramalingareddy

Font Awesome Icons

Leave a Reply

Your email address will not be published. Required fields are marked *