ಕೆಲಸಕ್ಕೆ ಮರಳುವಂತೆ ಕಂಪನಿ ಆದೇಶ – News Karnataka Kannada (ನ್ಯೂಸ್ ಕರ್ನಾಟಕ ಕನ್ನಡ)

ನವದೆಹಲಿ: ಏರ್ ಇಂಡಿಯಾ  ವಿಮಾನ ಸಂಸ್ಥೆಯ ಉದ್ಯೋಗಿಗಳು ಹೇಳದೆ ಕೇಳದೆ ರಜಾ ಹಾಕಿದ್ದರಿಂದ ಇಂದು ಏರ್ ಇಂಡಿಯಾ ಎಕ್ಸ್‌ಪ್ರೆಸ್ 85 ವಿಮಾನಗಳನ್ನು ರದ್ದುಗೊಳಿಸುವುದಾಗಿ ಘೋಷಿಸಿತು. ಹೀಗಾಗಿ  ತನ್ನ 30 ಉದ್ಯೋಗಿಗಳನ್ನು ಕೆಲಸದಿಂದ ವಜಾಗೊಳಿಸಿತ್ತು.

ಈ ಹಿನ್ನೆಲೆಯಲ್ಲಿ ಸಿಬ್ಬಂದಿ 2 ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದರು. ಇದೀಗ ವಜಾಗೊಂಡಿರುವ ಎಲ್ಲಾ ಕ್ಯಾಬಿನ್ ಸಿಬ್ಬಂದಿಯನ್ನು ತಕ್ಷಣದಿಂದ ಜಾರಿಗೆ ಬರುವಂತೆ ಮತ್ತೆ ಕೆಲಸಕ್ಕೆ ಸೇರಿಸಿಕೊಳ್ಳಲು ಏರ್ ಇಂಡಿಯಾ ಎಕ್ಸ್‌ಪ್ರೆಸ್ ಒಪ್ಪಿಕೊಂಡಿದೆ.

ಇಂದು ಮುಖ್ಯ ಕಾರ್ಮಿಕ ಆಯುಕ್ತರು ಕರೆದಿದ್ದ ಸಭೆಯಲ್ಲಿ ಏರ್ ಇಂಡಿಯಾ ಎಕ್ಸ್‌ಪ್ರೆಸ್ ಆಡಳಿತವು ಪ್ರತಿಭಟನಾ ನಿರತ ಸಿಬ್ಬಂದಿಯನ್ನು ಭೇಟಿ ಮಾಡಿದ ನಂತರ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.

ಗುರುವಾರ ಸಂಜೆ 4 ಗಂಟೆಯೊಳಗೆ ಮತ್ತೆ ಕರ್ತವ್ಯಕ್ಕೆ ಸೇರಲು ಏರ್ ಇಂಡಿಯಾ ಸೂಚನೆ ನೀಡಿದೆ.

ಸಿಬ್ಬಂದಿಯನ್ನು ವಜಾಗೊಳಿಸಿದ್ದರಿಂದ ಮಂಗಳವಾರ ರಾತ್ರಿಯಿಂದ 100ಕ್ಕೂ ಹೆಚ್ಚು ವಿಮಾನಗಳು ರದ್ದಾಗಿದ್ದವು.

Font Awesome Icons

Leave a Reply

Your email address will not be published. Required fields are marked *