ಕೇರಳದ ಐವರಲ್ಲಿ ʻವೆಸ್ಟ್‌ ಲೈನ್‌ ಜ್ವರʼ ಪತ್ತೆ

ಕೇರಳ : ಕೇರಳದ ಕೋಯಿಕ್ಕೋಡ್‌ ಜಿಲ್ಲೆಯಲ್ಲಿ ವೆಸ್ಟ್‌ ನೈಲ್‌ ಫೀವರ್‌ನ ಐದು ಪ್ರಕರಣಗಳು ಪತ್ತೆಯಾಗಿವೆ. ಅವರ ಆರೋಗ್ಯ ಸ್ಥಿತಿ ಸಹಜವಾಗಿದ್ದು, ಮನೆಗಳಲ್ಲೇ ಚಿಕಿತ್ಸೆ ಪಡೆಯುತ್ತಿದಾರೆ. ರೋಗಿಗಳು ವಾಸವಿರುವ ಮನೆಗಳ ಸುತ್ತ ಬೇರೆ ಯಾರಲ್ಲೂ ಜ್ವರ ಕಂಡುಬಂದಿಲ್ಲ ಎಂದು ಜಿಲ್ಲಾ ಕಣ್ಗಾವಲು ತಂಡದ ಅಧಿಕಾರಿ ಹೇಳಿದ್ದಾರೆ. ಒಬ್ಬ ವ್ಯಕ್ತಿಯಲ್ಲಿ ಮಾತ್ರ ಸೋಂಕು ಕಂಡುಬಂದಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ರೋಗದ ಲಕ್ಷಣ ಕಂಡುಬಂದಿದ್ದವರ ಪ್ರಯೋಗಾಲಯ ಮಾದರಿಯನ್ನು ಪುಣೆಯ ರಾಷ್ಟ್ರೀಯ ವೈರಾಣು ಕೇಂದ್ರಕ್ಕೆ ಕಳುಹಿಸಲಾಗುತ್ತದೆ. ಈಗ ಅದರ ವರದಿ ಬಂದಿದ್ದು, ಐವರು ವೆಸ್ಟ್‌ ನೈಲ್‌ ಫೀವರ್‌ನಿಂದ ಬಳಲುತ್ತಿರುವುದು ಗೊತ್ತಾಗಿದೆ. ಈ ಜ್ವರ ಸೊಳ್ಳೆಗಳಿಂದ ಹರಡುತ್ತದೆ ಎನ್ನಲಾಗಿದೆ.

1937 ರಲ್ಲಿ ಮೊದಲ ಬಾರಿಗೆ ಉಗಾಂಡಾದಲ್ಲಿ ಈ ಜ್ಯರ ಪತ್ತೆಯಾಗಿತ್ತು. 2011ರಲ್ಲಿ ಕೇರಳದಲ್ಲಿ ಮೊದಲ ಬಾರಿಗೆ ಪತ್ತೆಯಾಗಿತ್ತು. 2019ರಲ್ಲಿ ಮಲ್ಲಪುರಂನಲ್ಲಿ ಒಬ್ಬ ಬಾಲಕ ಜ್ವರದಿಂದ ಮೃತಪಟ್ಟಿದ್ದ. ಮೇ 2022ರಲ್ಲಿ 47 ವರ್ಷದ ವ್ಯಕ್ತಿ ಸಾವನಪ್ಪಿದ್ದ

Font Awesome Icons

Leave a Reply

Your email address will not be published. Required fields are marked *