ವಯನಾಡು,ಜುಲೈ,31,2024 (www.justkannada.in): ಕೇರಳದ ವಯನಾಡಿನಲ್ಲಿ ಸಂಭವಿಸಿರುವ ಭೀಗರ ಗುಡ್ಡ ಕುಸಿತ ದುರಂತದಲ್ಲಿ 162 ಮಂದಿ ಸಾವನ್ನಪ್ಪಿದ್ದು ಈ ಪೈಕಿ ಕರ್ನಾಟಕದ 6 ಮಂದಿ ಮೃತಪಟ್ಟಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಚಾಮರಾಜನಗರ ಹಾಗೂ ಮಂಡ್ಯ ಜಿಲ್ಲೆ ಮೂಲವದವರು ಗುಡ್ಡ ಕುಸಿತದಲ್ಲಿ ಮೃತಪಟ್ಟಿದ್ದಾರೆ ಎನ್ನಲಾಗಿದೆ. 50 ವರ್ಷದ ರಾಜೇಂದ್ರ, 45 ವರ್ಷದ ರತ್ನಮ್ಮ, ವಯನಾಡಿನ ಮೇಪಾಡಿಯಲ್ಲಿ ವಾಸವಿದ್ದ 62 ವರ್ಷದ ಪುಟ್ಟಸಿದ್ದಶೆಟ್ಟಿ ಮತ್ತು 50 ವರ್ಷದ ರಾಣಿ ಎಂಬವವರು ಸಾವನಪ್ಪಿದ್ದಾರೆ. ಇವರೆಲ್ಲರೂ ಚಾಮರಾಜನಗರ ಜಿಲ್ಲೆಯವರು. ಮಂಡ್ಯದ ಎರಡೂವರೆ ವರ್ಷದ ನಿಹಾಲ್, ಅಜ್ಜಿ ಲೀಲಾವತಿ (55) ಶವ ಕೂಡ ಪತ್ತೆಯಾಗಿದೆ.
ರಾಜೇಂದ್ರ ಮತ್ತು ರತ್ನಮ್ಮ ಇರಸವಾಡಿ ಗ್ರಾಮದವರಾಗಿದ್ದು ಈ ಇಬ್ಬರ ಮೃತದೇಹಗಳಿಗಾಗಿ ಶೋಧ ಕಾರ್ಯಾಚರಣೆ ನಡೆಯುತ್ತಿದೆ. ಇವರಿಬ್ಬರೂ ಕೇರಳದ ಚೂರಲ್ಲಾದಲ್ಲಿ ಕೆಲಸ ಮಾಡಿಕೊಂಡಿದ್ದರು. ಚಾಮರಾಜನಗರದ ಜಿಲ್ಲೆಯ ತ್ರಯಂಬಕಪುರದ ಸ್ವಾಮಿಶೆಟ್ಟಿ ಎಂಬವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎನ್ನಲಾಗಿದೆ.
ಕೇರಳದ ವಯನಾಡು ಜಿಲ್ಲೆಯ ಮುಂಡಕೈನಲ್ಲಿ ಚಾಮರಾಜನಗರ ಜಿಲ್ಲೆ ಗುಂಡ್ಲುಪೇಯ ಮತ್ತೊಂದು ಕುಟುಂಬ ನಾಪತ್ತೆಯಾಗಿದೆ ಎನ್ನಲಾಗಿದೆ. ಟೀ ಎಸ್ಟೇಟ್ ನಲ್ಲಿ ಕೆಲಸ ಮಾಡುತ್ತಿದ್ದ ಝಾನ್ಸಿರಾಣಿ ಮತ್ತು ಅವರ ಎರಡೂವರೆ ವರ್ಷದ ಪುತ್ರ ನಿಹಾಲ್ ಗುಡ್ಡಕುಸಿತದಲ್ಲಿ ನಾಪತ್ತೆಯಾಗಿದ್ದಾರೆ ಎನ್ನಲಾಗಿದೆ. ಗುಡ್ಡ ಕುಸಿತದಿಂದ ಮುಂಡಕೈ ಗ್ರಾಮ ನಾಶವಾಗಿದ್ದು ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ ಎನ್ನಲಾಗಿದೆ.
Key words: Kerala, Landslide, 6 dead, Karnataka