ಗಣೇಶೋತ್ಸವಕ್ಕೆ ಬೆಸ್ಕಾಂನಿಂದ ತಾತ್ಕಾಲಿಕ ವಿದ್ಯುತ್ ಸಂಪರ್ಕ : ಸುರಕ್ಷತಾ ಗೈಡ್ ಲೈನ್ಸ್ ಹೀಗಿದೆ » Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್


ಬೆಂಗಳೂರು, ಸೆಪ್ಟೆಂಬರ್,4, 2024 (www.justkannada.in): ಸಾರ್ವಜನಿಕ ಗಣೇಶೋತ್ಸವಕ್ಕೆ ತಾತ್ಕಾಲಿಕ ವಿದ್ಯುತ್‌ ಸಂಪರ್ಕ ಪಡೆಯಲು ಆಯಾ ಉಪವಿಭಾಗಾಧಿಕಾರಿಗಳನ್ನು ಸಂಪರ್ಕಿಸುವಂತೆ ಬೆಸ್ಕಾಂ ಮನವಿ ಮಾಡಿದೆ.

ಈ ಸಂಬಂಧ ಪ್ರಕಟಣೆ ಹೊರಡಿಸಿರುವ ಬೆಸ್ಕಾಂ, “ಸಂಬಂಧಪಟ್ಟ ಸ್ಥಳೀಯ ಪ್ರಾಧಿಕಾರದ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಿ ವಿಳಂಬವಿಲ್ಲದೇ, ನಿಯಮಾವಳಿಗಳ ಅನ್ವಯ ತಾತ್ಕಾಲಿಕ ವಿದ್ಯುತ್ ಸಂಪರ್ಕವನ್ನು ಕಲ್ಪಿಸುವಂತೆ ಉಪವಿಭಾಗೀಯ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ,” ಎಂದು ತಿಳಿಸಿದೆ.

“ಹಬ್ಬದ ಸಂಭ್ರಮದ ಜತೆಗೆ ಸುರಕ್ಷತೆ ಬಗ್ಗೆಯೂ ಸಾವರ್ಜನಿಕರು ಕಾಳಜಿ ವಹಿಸಬೇಕು. ಗಣೇಶೋತ್ಸವಕ್ಕೆ ಬೆಳಕಿನ ವ್ಯವಸ್ಥೆ, ದೀಪಾಲಂಕಾರಕ್ಕೆ ಬೆಸ್ಕಾಂ ವತಿಯಿಂದ ಸಹಕಾರ ನೀಡಲಾಗುವುದು. ಸಾರ್ವಜನಿಕ ಗಣೇಶೋತ್ಸವದಲ್ಲಿ ಮೂರ್ತಿ ಪ್ರತಿಷ್ಠಾಪನೆ ಮತ್ತು ವಿಸರ್ಜನೆ ವೇಳೆ ಕೈಗೊಳ್ಳಬೇಕಾದ ಸುರಕ್ಷತಾ ಕ್ರಮಗಳನ್ನು ತಪ್ಪದೇ ಪಾಲಿಸಿ, ವಿದ್ಯುತ್‌ ಅವಘಡಗಳಾಗದಂತೆ ಎಚ್ಚರವಹಿಸಿ,” ಎಂದು ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ್‌ ಬೀಳಗಿ ಮನವಿ ಮಾಡಿದ್ದಾರೆ.

ಸುರಕ್ಷತಾ  ಕ್ರಮಗಳು:

ಗಣೇಶ ಹಬ್ಬಕ್ಕೆ ತೋರಣ, ಪೆಂಡಾಲ್‌, ಸೀರಿಯಲ್ ಲೈಟ್‌ ಗಳನ್ನು ಹಾಕುವ ಮುನ್ನ ವಿದ್ಯುತ್ ತಂತಿಗಳ ಬಗ್ಗೆ ಗಮನವಿರಲಿ.

ಸೀರಿಯಲ್ ಲೈಟ್ ತಂತಿಗಳು ಸಮರ್ಪಕವಾಗಿ ಇನ್ಸುಲೇಟ್ ಆಗಿವೆಯೇ ಎನ್ನುವುದನ್ನು ಪರೀಕ್ಷಿಸಿಕೊಳ್ಳಿ.

ಸೀರಿಯಲ್‌ ಲೈಟ್‌, ದೀಪಗಳನ್ನು ಹಾಕುವಾಗ ವಿದ್ಯುತ್‌ ಕಂಬದಿಂದ ಸಂಪರ್ಕ ಪಡೆಯದಿರಿ.

ವಿದ್ಯುತ್ ತಂತಿ, ವಿದ್ಯುತ್ ಕಂಬ ಅಥವಾ ಪರಿವರ್ತಕ ಕೇಂದ್ರಗಳಿಗೆ ಚಪ್ಪರ,  ಶಾಮಿಯಾನಗಳನ್ನು ಕಟ್ಟದಿರಿ.

ಗಣೇಶ ಮೆರವಣಿಗೆ ವೇಳೆ ರಸ್ತೆ ಬದಿಯ ವಿದ್ಯುತ್ ಮಾರ್ಗಗಳ ಬಗ್ಗೆ ಎಚ್ಚರ, ವಿದ್ಯುತ್‌ ತಂತಿಗಳನ್ನು ಮೇಲಕ್ಕೆ ಎತ್ತುವ ಪ್ರಯತ್ನ ಮಾಡದಿರಿ. ಮೆರವಣಿಗೆ ಮಾರ್ಗವನ್ನು ಮುಂಚಿತವಾಗಿ ಉಪವಿಭಾಗಾಧಿಕಾರಿಗಳ ಗಮನಕ್ಕೆ ತನ್ನಿ, ಅವರು ಅಗತ್ಯ ನೆರವು ಒದಗಿಸುವರು.

ತುಂಡಾದ ವೈರ್‌, ವಿದ್ಯುತ್‌ ಕಿಡಿ ಗಮನಕ್ಕೆ ಬಂದರೆ, ಕೂಡಲೇ 1912 ಸಹಾಯವಾಣಿಗೆ ಕರೆ ಮಾಡಿ.

ವಿದ್ಯುತ್ ಪರಿಕರಗಳು ಇರುವ ಸ್ಥಳಗಳಲ್ಲಿ “ಡೇಂಜರ್ ಜೋನ್” ಎಂದು ಸೂಚಿಸಬೇಕು.

ತಾತ್ಕಾಲಿಕ ಸಂಪರ್ಕದ ಮಾಹಿತಿ:

ತಾತ್ಕಾಲಿಕ ವಿದ್ಯುತ್ ಸಂಪರ್ಕಕ್ಕೆ ಅರ್ಜಿ ಸಲ್ಲಿಸುವಾಗ, ಎಲ್ಲಾ ಸಂಬಂಧಿತ (ಬಿಬಿಎಂಪಿ/ಬಿಡಿಎ/ಗ್ರಾಮ ಪಂಚಾಯಿತಿ/ಆರಕ್ಷಕ ಠಾಣೆ ಹಾಗೂ ಇನ್ನಿತರ) ಪ್ರಾಧಿಕಾರಗಳಿಂದ ನಿರಾಕ್ಷೇಪಣಾ ಪತ್ರ ಪಡೆದಿರಬೇಕು.

ಸ್ಥಳೀಯ ಪ್ರಾಧಿಕಾರದಿಂದ ನಿರಾಕ್ಷೇಪಣಾ ಪತ್ರ ಪಡೆದ ನಂತರ, ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಅಥವಾ ಸಹಾಯಕ ಇಂಜಿನಿಯರ್‌ ಗಳು ಗಣೇಶ ವಿಗ್ರಹವನ್ನು ಪ್ರತಿಷ್ಠಾಪಿಸಲು ನಿರ್ಮಾಣ ಮಾಡಿರುವ ಪೆಂಡಾಲ್ ಅಥವಾ ಸಮಾರಂಭ ಸ್ಥಳದ ಸುರಕ್ಷತೆಯನ್ನು ಖಾತ್ರಿ ಪಡಿಸುತ್ತಾರೆ.

ವೈರಿಂಗ್ ಸುರಕ್ಷತೆ, ಎಂ.ಸಿ.ಬಿ ಮತ್ತು ಇಐಎ ಅಳವಡಿಕೆಯ ಬಗ್ಗೆ ನೋಂದಾಯಿತ ವಿದ್ಯುತ್ ಗುತ್ತಿಗೆದಾರರಿಂದ ವೈರಿಂಗ್ ಸಮಾಪನ ವರದಿಯನ್ನು ಪಡೆದು ಸ್ಥಳ ಪರಿಶೀಲಿಸಿದ ನಂತರ ಸಂಪರ್ಕ ಕಲ್ಪಿಸಲಾಗುವುದು.

ತಾತ್ಕಾಲಿಕ ವಿದ್ಯುತ್ ಸಂಪರ್ಕದ ನಿರೀಕ್ಷಿತ ಸಮಯ ಮುಗಿದ ಬಳಿಕ ಅಂತಿಮ ರೀಡಿಂಗ್ ನಮೂದಿಸಿ ಮಾಪಕ ವಾಪಸ್ ನೀಡಬೇಕು.

ENGLISH SUMMARY…

BESCOM issues guidelines for Gowri Ganesha Festival organizers

• Safety guidelines to be followed during setting up Pandal and Ganapati idol immersion

Bengaluru, Sep 3, 2024: BESCOM has instructed Ganesh Chaturthi festival organizers to contact the relevant sub-divisional officers to secure temporary electricity connections for the festival.

“Sub-divisional authorities have been directed to provide immediate electricity connections by the established norms, ensuring prompt coordination with local authority officials,” stated the BESCOM guideline.

“While celebrating the festival, the public must also prioritize safety. BESCOM will assist with the lighting system for the Ganesh festival. It is crucial to adhere to safety measures during the installation and dismantling of the idol at public events to prevent any electrical accidents,” BESCOM Managing Director Mahantesh Bilagi said.

Safety Measures
• When setting up pandals, serial lights, and other decorations for the Ganesh festival, exercise caution with electrical wires.

• Ensure that the wiring for serial lights is adequately insulated.

• Avoid contact with electric poles when installing serial lights.

• Do not attach shamiyanas, tents, or other items to electrical wires, poles, or transformer stations.

• Be mindful of overhead power lines during the Ganesh procession. Do not attempt to lift power lines. Notify Sub-Divisional Officers of the procession route in advance so they can provide necessary assistance.
• Report any live wires or electrical sparks immediately by calling the 1912 helpline.

• Mark “Danger Zones”, where electrical equipment is set up for the Ganesh pandal installation.

Temporary Power connection for Ganesha Chaturthi Pandal

When applying for a temporary power connection for a Ganesha Pandal, you must obtain a No Objection Letter from all relevant authorities, including BBMP, BDA, the Grama Panchayat, and the local police station.

After securing the No Objection Certificate from the relevant authorities, the Assistant Executive Engineer or Assistant Engineers will visit the site of the Ganesha Chaturthi installation to conduct an inspection. Only then will they grant permission for the Ganesha Chaturthi organizers to proceed.

Once you have obtained the wiring completion report from a registered electrical contractor, which confirms the safety of the wiring, installation of the MCB (Miniature Circuit Breaker), and EIA (Earthing Inspection and Approval), the relevant authorities will then visit the Ganesha Chaturthi installation site to provide the connection to the organizers.

After the temporary electricity connection is provided, the meter must be returned, and the final reading must be recorded once the specified period has ended.

Key words: Temporary power, connection, BESCOM, Ganesha festival

Font Awesome Icons

Leave a Reply

Your email address will not be published. Required fields are marked *