ಹೈದರಾಬಾದ್: ಮಕರ ಸಂಕ್ರಾಂತಿ ಗಾಳಿಪಟ ಹಾರಿಸುವ ಪದ್ಧತಿ ಎಲ್ಲರಿಗೂ ಗೊತ್ತೇ ಇದೆ ಈ ಸಂಭ್ರಮದ ನಡುವೆ ಅಘಾತಕಾರಿ ಘಟನೆಯೊಂದು ನಡೆದಿದೆ.
ಮನೆಯ ಟೆರೇಸ್ ಮೇಲೆ ಗಾಳಿಪಟ ಹಾರಿಸುತ್ತಿದ್ದಾಗ ವಿದ್ಯುತ್ ತಂತಿ ಸ್ಪರ್ಶಿಸಿ ಬಾಲಕ ತನಿಷ್ಕ್ (11) ಮೃತಪಟ್ಟಿರುವ ಘಟನೆ ಅತ್ತಾಪುರ ಪ್ರದೇಶದಲ್ಲಿ ನಡೆದಿದೆ.
ತನಿಷ್ಕ್ ತಮ್ಮ ಮನೆಯ ಮಹಡಿ ಮೇಲೆ ನಿಂತು ಗಾಳಿ ಪಟ ಹಾರಿಸುವ ವೇಳೆ ಗಾಳಿ ಪಟದ ದಾರ ವಿದ್ಯುತ್ ತಂತಿಗೆ ಸಿಲುಕಿಕೊಂಡಿದೆ. ಅದನ್ನು ಬಿಡಿಸಲು ಹೋದಾಗ ಬಾಲಕಿನಿಗೆ ವಿದ್ಯುತ್ ಪ್ರವಹಿಸಿದೆ.
ತಕ್ಷಣ ಬಾಲಕ ಕಿರುಚಿಕೊಂಡಿದ್ದಾನೆ. ತಕ್ಷಣ ಆಸ್ಪತ್ರೆಗೆ ದಾಖಲಿಸಿದ್ದರೂ ಕೂಡ ಚಿಕಿತ್ಸೆ ಫಲಕಾರಿಯಾಗದೇ ಬಾಲಕ ಸಾವನ್ನಪ್ಪಿರುವುದಾಗಿ ತಿಳಿದು ಬಂದಿದೆ.