ಗೋವಾ: ಗೋವಾ ಸರ್ಕಾರ, ಎಂಟರ್ ಟೈನ್ಮೆಂಟ್ ಸೊಸೈಟಿ ಆಫ್ ಗೋವಾ ಮತ್ತು ಎನ್.ಎಫ್.ಡಿ.ಸಿ ಇಂಡಿಯಾ ಜಂಟಿಯಾಗಿ ಗೋವಾದ ಪಣಜಿಯಲ್ಲಿ ಆಯೋಜಿಸಿರುವ 54ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಕನ್ನಡದ ‘ದಿ ಗ್ರೇ ಗೇಮ್ಸ್’ ಚಿತ್ರ ಆಯ್ಕೆಯಾಗಿದೆ.
ವಿಜಯ್ ರಾಘವೇಂದ್ರ, ಭಾವನಾ ರಾವ್, ಶ್ರುತಿ ಪ್ರಕಾಶ್, ಅಪರ್ಣ ವಸ್ತಾರೆ, ಜೈ ಮುಂತಾದವರು ನಟಿಸಿರುವ ಈ ಚಿತ್ರವನ್ನು ರಾಜ್ಯ ಪ್ರಶಸ್ತಿ ವಿಜೇತ ನಿರ್ದೇಶಕ ಗಂಗಾಧರ್ ಸಾಲಿಮಠ್ ನಿರ್ದೇಶನ ಮಾಡಿದ್ದಾರೆ.
ಈಗಾಗಲೇ ಬಿಡುಗಡೆಗೆ ಸಿದ್ಧವಾಗಿರುವ ‘ಗ್ರೇ ಗೇಮ್ಸ್’ ಚಿತ್ರವು ಗೋವಾದ ಅಂತಾರಾಷ್ಟ್ರೀಯ ಚಿತ್ರೋತ್ಸವದ ‘ರೆಡ್ ಕಾರ್ಪೆಟ್ ಗಾಲ ಪ್ರೀಮಿಯರ್’ ವಿಭಾಗದಡಿ ಮೊದಲ ಪ್ರದರ್ಶನ ಕಾಣುತ್ತಿದೆ. ಈ ವಿಭಾಗದಲ್ಲಿ ಭಾರತದ ಹಲವು ಚಿತ್ರಗಳು ಪ್ರೀಮಿಯರ್ ಆಗುತ್ತಿದ್ದು, ಈ ಪೈಕಿ ಕನ್ನಡದ ‘ದಿ ಗ್ರೇ ಗೇಮ್ಸ್’ ಸಹ ಒಂದಾಗಿರುವುದು ವಿಶೇಷ.