ರಾಮನಗರ,ನವೆಂಬರ್,23,2024 (www.justkannada.in): ಚನ್ನಪಟ್ಟಣ ವಿಧಾನಸಭೆ ಉಪಚುನಾವಣೆಯಲ್ಲಿ ಸೋಲನುಭವಿಸಿರುವ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ, ತಮ್ಮ ಸೋಲಿನ ಕುರಿತು ಪ್ರತಿಕ್ರಿಯೆ ನೀಡಿದ್ದಾರೆ.
ರಾಮನಗರದ ಬಿಡದಿ ತೋಟದ ಮನೆಯಲ್ಲಿ ಮಾತನಾಡಿರುವ ನಿಖಿಲ್ ಕುಮಾರಸ್ವಾಮಿ, ಜನರ ತೀರ್ಮಾನಕ್ಕೆ ತಲೆ ಬಾಗುವೆ. ನಾನು ಸೋಲಿನಿಂದ ಎದೆಗುಂದುವ ಪ್ರಶ್ನೆಯೇ ಇಲ್ಲ. ಸೋಲು ಗೆಲುವನ್ನ ನಾನು ಸಮಾನವಗಿ ಸ್ವೀಕಾರ ಮಾಡುತ್ತೇನೆ. ರಾಮನಗರ ಜಿಲ್ಲೆಯಲ್ಲಿ ಎಲ್ಲರಿಗೂ ಧ್ವನಿಯಾಗಿ ಕೆಲಸ ಮಾಡುತ್ತೇನೆ. ಪ್ರಜಾ ಪ್ರಭುತ್ವ ವ್ಯವಸ್ಥೆಯಲ್ಲಿ ಜನರ ತೀರ್ಪು ಅಂತಿಮ ಎಂದರು.
ಜನರ ಪ್ರೀತಿ, ವಾತ್ಸಲ್ಯ ಸಿಕ್ಕಿದೆ. ನಾನು ಈ ಜಿಲ್ಲೆಯ ಮಗ ಅಂತ ಭಾವಿಸುತ್ತೇನೆ. ಚನ್ನಪಟ್ಟಣ ಫಲಿತಾಂಶ ಆಘಾತ ತಂದಿದೆ. ಒಬ್ಬ ಯುವಕನಿಗೆ 87 ಸಾವಿರ ಮತ ಬಂದಿದೆ. ಇದು ಬಯಸದೇ ಬಂದ ಚುನಾವಣೆ. ನಿಮ್ಮ ಋಣ ತೀರಿಸುವ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದರು.
ಜೆಡಿಎಸ್, ಬಿಜೆಪಿ ಕಾರ್ಯಕರ್ತರಿಗೂ ನಾನು ಕೃತಜ್ಞತೆ ಸಲ್ಲಿಸುತ್ತೇನೆ. ಹೆಚ್ ಡಿ ದೇವೇಗೌಡರು ಮತ್ತು ಹೆಚ್ ಡಿ ಕುಮಾರಸ್ವಾಮಿ ಅವರನ್ನು ಬೆಳೆಸಿದ್ದು ರಾಮನಗರ ಜಿಲ್ಲೆಯ ಜನರು. ನಾನು ರಾಮನಗರದಲ್ಲಿ ಜನಿಸಿಲ್ಲ. ಆದರೆ ಭಾವನಾತ್ಮಕ ಸಂಬಂಧ ಹೊಂದಿದ್ದೇನೆ. ನಾನು ಕುಮಾರಸ್ವಾಮಿ ಅವರ ಜೊತೆ ಸೇರಿ ಜಿಲ್ಲೆಯ ಅಭಿವೃದ್ಧಿ ಕಾರ್ಯದಲ್ಲಿ ತೊಡಗುತ್ತೇನೆ ಎಂದರು.
Key words: Channapatna, By-election, defeat, Nikhil Kumaraswamy