ಚಾಲಕನ ನಿಯಂತ್ರಣ ತಪ್ಪಿ ಪಿಕಪ್ ವಾಹನ ಪಲ್ಟಿ: 14 ಜನರ ದುರ್ಮರಣ

ಮಧ್ಯಪ್ರದೇಶ:  ಚಾಲಕನ ನಿಯಂತ್ರಣ ತಪ್ಪಿ ಪಿಕಪ್ ವಾಹನ ಪಲ್ಟಿಯಾಗಿ ಕನಿಷ್ಠ 14 ಮಂದಿ ಸಾವನ್ನಪ್ಪಿದ್ದು, 21 ಜನರು ಗಾಯಗೊಂಡ ಘಟನೆ ಮಧ್ಯಪ್ರದೇಶದ ದಿಂಡೋರಿ ಜಿಲ್ಲೆಯಲ್ಲಿ ನಡೆದಿದೆ.

ಬಿಚಿಯಾ-ಬರ್ಜಾರ್ ಗ್ರಾಮದಲ್ಲಿ ಪಿಕಪ್ ನಿಯಂತ್ರಣ ತಪ್ಪಿ 25 ಅಡಿ ಆಳದ ಹೊಲಕ್ಕೆ ಉರುಳಿ ಬಿದ್ದಿದೆ. ಅಪಘಾತದ ಸಮಯದಲ್ಲಿ, ವಾಹನದಲ್ಲಿದ್ದ ಸುಮಾರು 35 ಜನರು ದೇವ ಭಾರೈ ಕಾರ್ಯಕ್ರಮದಿಂದ ಹಿಂತಿರುಗುತ್ತಿದ್ದಾಗ ಘಟನೆ ಸಂಭವಿಸಿದೆ.

ಗಾಯಾಳುಗಳು ಶಹಾಪುರ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮೃತರನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.

ಮುಖ್ಯಮಂತ್ರಿ ಡಾ.ಮೋಹನ್ ಯಾದವ್ ತೀವ್ರ ಸಂತಾಪ ವ್ಯಕ್ತಪಡಿಸಿದ್ದು, ಮೃತರ ಆತ್ಮಕ್ಕೆ ಚಿರಶಾಂತಿ ನೀಡಲಿ ಹಾಗೂ ಕುಟುಂಬದ ಸದಸ್ಯರಿಗೆ ಈ ದುಃಖ ಸಹಿಸಿಕೊಳ್ಳುವ ಶಕ್ತಿ ನೀಡಲಿ ಎಂದು ದೇವರಲ್ಲಿ ಪ್ರಾರ್ಥಿಸಿದ್ದಾರೆ.

Font Awesome Icons

Leave a Reply

Your email address will not be published. Required fields are marked *