ರಾಮನಗರ: ಚನ್ನಪಟ್ಟಣ ತಾಲೂಕಿನ ಕೋಲೂರು ಗ್ರಾಮದ ಬಳಿ ಚುನಾವಣಾ ಚೆಕ್ ಪೋಸ್ಟ್ಗೆ ಲಾರಿ ಡಿಕ್ಕಿ ಹೊಡೆದು ಪಲ್ಟಿಯಾದ ಘಟನೆ ತಡರಾತ್ರಿ ನಡೆದಿದೆ.
ಮರದ ಹೊಟ್ಟು ತುಂಬಿಕೊಂಡು ಮಂಡ್ಯದಿಂದ ಬೆಂಗಳೂರು ಕಡೆಗೆ ಹೋಗುತ್ತಿದ್ದ ಲಾರಿ ಚೆಕ್ ಪೋಸ್ಟ್ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಚಾಲಕ ಮದ್ಯಪಾನ ಮಾಡಿ ಲಾರಿ ಚಲಾಯಿಸಿದ್ದರಿಂದ ಈ ಅಪಘಾತ ಸಂಭವಿಸಿದೆ.
ಅದೃಷ್ಟವಶಾತ್ ಕರ್ತವ್ಯ ನಿರತರಾಗಿದ್ದ ಸಿಬ್ಬಂದಿ ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಚನ್ನಪಟ್ಟಣ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಲಾರಿ ಚಾಲಕನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.