ಬೆಂಗಳೂರು, ಡಿಸೆಂಬರ್,3,2024 (www.justkannada.in): ಚುಣಾವಣಾ ಬಾಂಡ್ ಹೆಸರಲ್ಲಿ ಸುಲಿಗೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ನಳೀನ್ ಕುಮಾರ್ ಕಟೀಲ್ ಬಿಗ್ ರಿಲೀಫ್ ಸಿಕ್ಕಿದೆ
ಚುನಾವಣಾ ಬಾಂಡ್ ಹೆಸರಿನಲ್ಲಿ ಸುಲಿಗೆ ಮಾಡಿರುವ ಆರೋಪಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಹಾಗೂ ಮಾಜಿ ಸಂಸದ ನಳೀನ್ ಕುಮಾರ್ ಕಟೀಲ್ ವಿರುದ್ಧ ದಾಖಲಾಗಿದ್ದ ಎಫ್ಐಆರ್ ರದ್ದುಗೊಳಿಸಿ ಹೈಕೋರ್ಟ್ ಆದೇಶಿಸಿದೆ.
ಚುನಾವಣಾ ಬಾಂಡ್ ಹೆಸರಿನಲ್ಲಿ ಸುಲಿಗೆ ಮಾಡಿದ್ದಾರೆ ಎಂದು ಆರೋಪಿಸಿ ಆದರ್ಶ್ ಅಯ್ಯರ್ ಎನ್ನುವರು ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್, ನಳಿನ್ ಕುಮಾರ್ ಕಟೀಲ್ ಸೇರಿದಂತೆ ಇತರರ ವಿರುದ್ಧ ಖಾಸಗಿ ದೂರು ದಾಖಲಿಸಿದ್ದರು. ಎಫ್ ಐಆರ್ ರದ್ದುಪಡಿಸಿವಂತೆ ಕೋರಿ ನಿರ್ಮಲಾ ಸೀತಾರಾಮನ್, ನಳೀನ್ ಕುಮಾರ್ ಕಟೀಲ್ ಹೈಕೋರ್ಟ್ ಮೆಟ್ಟಿಲೇರಿದ್ದರು.
ಈ ಅರ್ಜಿ ವಿಚಾರಣೆ ನಡೆಸಿದ್ದ ಹೈಕೋರ್ಟ್ ಏಕಸದಸ್ಯ ಪೀಠ, ಇಂದು (ಡಿಸೆಂಬರ್ 03) ಎಫ್ಐಆರ್ ರದ್ದುಪಡಿಸಿ ಆದೇಶ ಹೊರಡಿಸಿದೆ.
Key words: Election bond, illegal case, Nirmala Sitharaman, High court