ಜಮ್ಮು & ಕಾಶ್ಮೀರದ ಅನಂತ್‌ನಾಗ್‌-ರಾಜೌರಿ ಕ್ಷೇತ್ರದ ಮತದಾನ ಮುಂದೂಡಿಕೆ

ನವದೆಹಲಿ: ಲೋಕಸಭಾ ಚುನಾವಣೆ ಯ ಎರಡು ಹಂತದ ಮತದಾನ ಈಗಾಗಲೇ ಮುಗಿದಿದೆ. ಮೇ 7ರಂದು ಮೂರನೇ ಹಂತದ ಮತದಾನ ನಡೆಯಲಿದೆ. ಈ ಮಧ್ಯೆ ಮಂಗಳವಾರ ಚುನಾವಣಾ ಆಯೋಗ ಜಮ್ಮು ಮತ್ತು ಕಾಶ್ಮೀರದ ಅನಂತ್‌ನಾಗ್‌-ರಾಜೌರಿ ಲೋಕಸಭಾ ಕ್ಷೇತ್ರದ ಮತದಾನವನ್ನು ಮೇ 7ರಿಂದ ಮೇ 25ಕ್ಕೆ ಮುಂದೂಡಿದೆ.

ಚುನಾವಣಾ ಆಯೋಗವು ತನ್ನ ಅಧಿಸೂಚನೆಯಲ್ಲಿ, “ವಿವಿಧ ಲಾಜಿಸ್ಟಿಕ್ಸ್, ಸಂವಹನ ಮತ್ತು ಸಂಪರ್ಕದ ನೈಸರ್ಗಿಕ ಅಡೆತಡೆಯಿಂದಾಗಿ ಚುನಾವಣಾ ದಿನಾಂಕಗಳನ್ನು ಬದಲಾಯಿಸಲು ವಿವಿಧ ರಾಜಕೀಯ ಪಕ್ಷಗಳು ಮನವಿ ಸಲ್ಲಿಸಿದ್ದವು. ಈ ಎಲ್ಲ ಸಮಸ್ಯೆಗಳು ಪ್ರಚಾರಕ್ಕೆ ಅಡ್ಡಿಯಾಗುವುದರಿಂದ ಅಭ್ಯರ್ಥಿಗಳಿಗೆ ತೊಂದರೆಯಾಗುತ್ತದೆ ಎನ್ನುವುದನ್ನು ಮನಗಂಡಿದ್ದೇವೆ. ಇದು ಮತದಾನ ಪ್ರಕ್ರಿಯೆಯ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ ಎನ್ನುವ ಕಾರಣಕ್ಕೆ ದಿನಾಂಕ ಮುಂದೂಡಲಾಗಿದೆ” ಎಂದು ಹೇಳಿದೆ.

Font Awesome Icons

Leave a Reply

Your email address will not be published. Required fields are marked *