ಜಮ್ಮು ಕಾಶ್ಮೀರದ ಮುಂದಿನ ಸಿಎಂ ಹೆಸರು ಘೋಷಣೆ » Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್


ಶ್ರೀನಗರ, ಅಕ್ಟೋಬರ್,8,2024 (www.justkannada.in): ಜಮ್ಮು ಕಾಶ್ಮೀರ ವಿಧಾನಸಭಾ ಚುನಾವಣೆ ಫಲಿತಾಂಶ ಇಂದು ಪ್ರಕಟಗೊಂಡಿದ್ದು  ಕಾಂಗ್ರೆಸ್ ಮತ್ತು ನ್ಯಾಷನಲ್ ಕಾನ್ಪರೆನ್ಸ್ ಮೈತ್ರಿಕೂಟಕ್ಕೆ ಬಹುಮತ ದೊರೆತಿದೆ. ಈ ಹಿನ್ನೆಲೆಯಲ್ಲಿ  ಸರ್ಕಾರ ರಚನೆಗೆ ಅಂತಿಮ ತಯಾರಿಯನ್ನು ನಡೆಸಿದ್ದು, ಜಮ್ಮುಕಾಶ್ಮೀರದ ಮುಂದಿನ ಮುಖ್ಯಮಂತ್ರಿ ಅಭ್ಯರ್ಥಿ ಹೆಸರನ್ನ ನ್ಯಾಷನಲ್ ಕಾನ್ಫರೆನ್ಸ್ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಘೋಷಣೆ ಮಾಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಜಮ್ಮುಕಾಶ್ಮೀರದ 90 ವಿಧಾನಸಭಾ ಕ್ಷೇತ್ರಗಳ ಪೈಕಿ ಸರ್ಕಾರ ರಚನೆ 46 ಸ್ಥಾನಗಳ ಅಗತ್ಯ ಇದೆ. ಇಂದು ಚುನಾವಣಾ ಫಲಿತಾಂಶ ಪ್ರಕಟಗೊಂಡಿದ್ದು ಕಾಂಗ್ರೆಸ್ ಮತ್ತು ನ್ಯಾಷನಲ್ ಕಾನ್ಪರೆನ್ಸ್ ಮೈತ್ರಿಕೂಟ 48 ಸ್ಥಾನಗಳಲ್ಲಿ ಗೆದ್ದು ಸ್ಪಷ್ಟ ಬಹುಮತ ಗಳಿಸಿ ಅಧಿಕಾರ ಗದ್ದುಗೆಗೇರಲು ಮುಂದಾಗಿದೆ.

ಇದರ ಜೊತೆಗೆ ನೂತನ ಮುಖ್ಯಮಂತ್ರಿ ಅಭ್ಯರ್ಥಿಯ ಹೆಸರನ್ನು ನ್ಯಾಷನಲ್ ಕಾನ್ಫರೆನ್ಸ್ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರು ಘೋಷಣೆ ಮಾಡಿದ್ದು,  ತನ್ನ ಮಗ ಒಮರ್ ಅಬ್ದುಲ್ಲಾ ಜಮ್ಮು ಮತ್ತು ಕಾಶ್ಮೀರದ ಮುಂದಿನ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ತಿಳಿಸಿದ್ದಾರೆ.

ಜಮ್ಮು-ಕಾಶ್ಮೀರದ ಜನರು ನಮ್ಮ ಪರವಾಗಿ ಮತ ನೀಡಿದ್ದಾರೆ  ಅವರು ಆಗಸ್ಟ್ 5 ರಂದು ತೆಗೆದುಕೊಂಡ ನಿರ್ಧಾರವನ್ನು ಒಪ್ಪುವುದಿಲ್ಲ ಎಂದು ಅವರು ಸಾಬೀತುಪಡಿಸಿದ್ದಾರೆ. ಜಮ್ಮು ಮತ್ತು ಕಾಶ್ಮೀರದಲ್ಲಿ ಕಾಂಗ್ರೆಸ್ ಮತ್ತು ನ್ಯಾಷನಲ್ ಕಾನ್ಫರೆನ್ಸ್ ಮೈತ್ರಿಕೂಟ ಸ್ಪಷ್ಟ ಬಹುಮತ ಪಡೆಯುತ್ತಿದೆ. ಒಮರ್ ಅಬ್ದುಲ್ಲಾ ಜಮ್ಮು ಮತ್ತು ಕಾಶ್ಮೀರದ ಮುಂದಿನ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ತಿಳಿಸಿದ್ದಾರೆ.

Key words: Jammu and Kashmir, next CM, announced

Font Awesome Icons

Leave a Reply

Your email address will not be published. Required fields are marked *