ಜ.21 ಮಂಗಳೂರಿನಲ್ಲಿ ನಿಗಧಿಯಾಗಿದ್ದ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ ಮುಂದೂಡಿಕೆ: ಡಿಕೆಶಿ

ಬೆಂಗಳೂರು: ಮಂಗಳೂರಿನಲ್ಲಿ ಇದೇ ಜನವರಿ 21ರಂದು ನಿಗಧಿ ಮಾಡಲಾಗಿದ್ದ ರಾಜ್ಯ ಮಟ್ಟದ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶವನ್ನು ಮುಂದೂಡಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಪ್ರಕಟಣೆ ಮೂಲಕ ತಿಳಿಸಿದ್ದಾರೆ.

ಜ.15ರಂದು ರಾತ್ರಿ ಬೆಂಗಳೂರಿನಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿ ಮಹತ್ವದ ಮಾತುಕತೆ ನಡೆಸಿದ ಬಳಿಕ ಡಿಕೆ ಶಿವಕುಮಾರ್ ಅವರು ಮಂಗಳೂರಿನಲ್ಲಿ ಜನವರಿ 21ರಂದು ನಿಗದಿ ಮಾಡಲಾಗಿದ್ದ ರಾಜ್ಯ ಮಟ್ಟದ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶವನ್ನು ಮುಂದೂಡಿ ಪ್ರಕಟಣೆ ಹೊರಡಿಸಿದ್ದಾರೆ.

ಲೋಕಸಭೆ ಚುನಾವಣೆ ಹಿನ್ನೆಲೆ ಪಕ್ಷದ ಕಾರ್ಯಕರ್ತರನ್ನು ಸಜ್ಜುಗೊಳಿಸಲು ಈ ಸಮಾವೇಶ ನಡೆಸಲಾಗುತ್ತಿದ್ದು, ರಾಜ್ಯದ ಎಲ್ಲ ಜಿಲ್ಲೆಗಳಿಂದ ಕಾರ್ಯಕರ್ತರನ್ನು ಒಗ್ಗೂಡಿಸುವ ತಂತ್ರವಾಗಿತ್ತು ಆದರೆ, ಇದೀಗ ಸಮಾವೇಶವನ್ನು ಮುಂದೂಡಲಾಗಿದ್ದು, ದಿನಾಂಕವನ್ನು ಶೀಘ್ರದಲ್ಲೇ ತಿಳಿಸುವುದಾಗಿ ಡಿಕೆ ಶಿವಕುಮಾರ್ ಮಾಹಿತಿ ನೀಡಿದ್ದಾರೆ.

Font Awesome Icons

Leave a Reply

Your email address will not be published. Required fields are marked *