ಬೆಂಗಳೂರು: ಡೇ ಕೇರ್ ಸೆಂಟರ್ ನ 3ನೇ ಮಹಡಿಯಿಂದ ಬಿದ್ದು, ಗಂಭೀರ ಗಾಯಗೊಂಡಿದ್ದ ಮಗು ಚಿಕಿತ್ಸೆ ಫಲಿಸದೆ ಇಂದು ಮೃತಪಟ್ಟಿದೆ.
ಕೇರಳ ಮೂಲದ ಟೆಕ್ಕಿ ದಂಪತಿ ಜಿಟೋ ಟಾಮಿ ಜೋಸೆಫ್, ಬಿನಿಟೋ ಥಾಮಸ್ ಪುತ್ರಿ ಜಿನಾ ಮೃತ ಮಗು.
ಜನವರಿ 22 ರ ಮಧ್ಯಾಹ್ನ ಖಾಸಗಿ ಫ್ರೀ ಸ್ಕೂಲ್ (ನರ್ಸರಿ) ಮೂರನೇ ಮಹಡಿಯಿಂದ ಬಿದ್ದು ತಲೆಗೆ ತೀವ್ರ ಗಾಯವಾಗಿತ್ತು. ಹಾಗಾಗಿ ಹೆಬ್ಬಾಳ ಸಮೀಪದ ಖಾಸಗಿ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು.
ಮಗುವಿನ ತಂದೆ ಜಿಯೋ ಟಾಮಿ ಜೋಸೆಫ್ ಅವರು ‘ವಾಸ್ತವಾಂಶ ಮರೆಮಾಡಿ, ಸರಿಯಾದ ಮಾಹಿತಿ ನೀಡದೆ, ನಿರ್ಲಕ್ಷ್ಯ ವಹಿಸಿರುವ ಫ್ರೀ ಸ್ಕೂಲ್ ವಿರುದ್ದ ಹೆಣ್ಣೂರು ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.
ಹೆಣ್ಣೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿತ್ತು.