ತಮ್ಮ ನಿವಾಸದಿಂದ ಮತದಾನ ಮಾಡಿದ ಮಾಜಿ ಸಚಿವ ಜನಾರ್ಧನ ಪೂಜಾರಿ

ಬಂಟ್ವಾಳ: ಚುನಾವಣಾ ಆಯೋಗದ ನಿರ್ದೇಶನದಂತೆ ಕಳೆದ ಬಾರಿಯಂತೆ ಸೆಕ್ಟರ್‌ ಅಧಿಕಾರಿಗಳ ನೇತೃತ್ವದಲ್ಲಿ ಮತಗಟ್ಟೆ ಅಧಿಕಾರಿಗಳ ತಂಡ ಮನೆ-ಮನೆಗೆ ತೆರಳಿ ಮತದಾನ ಮಾಡಿಸುತ್ತಿದೆ.

ಲೋಕಸಭಾ ಚುನಾವಣೆ 2024 ಕ್ಕೆ ಸಂಬಂಧಿಸಿದಂತೆ 205-ಬಂಟ್ವಾಳ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ 85 ವರ್ಷಕ್ಕೆ ಮೇಲ್ಪಟ್ಟ ಮತ್ತು ಶೇಕಡಾ 40 ಕ್ಕಿಂತ ಹೆಚ್ಚಿನ ಅಂಗವೈಕಲ್ಯತೆ ಹೊಂದಿದ ಮತದಾರರ ಮನೆಗಳಿಗೆ ಮತಗಟ್ಟೆ ಅಧಿಕಾರಿಗಳ ತಂಡವು ತೆರಳಿ ಮತದಾನ ಮಾಡಿಸುವ ಪ್ರಕ್ರಿಯೆ ದಿನಾಂಕ 15-04-2024 ರಿಂದ ಪ್ರಾರಂಭವಾಗಿರುತ್ತದೆ.

ಕೇಂದ್ರದ ಮಾಜಿ ಸಚಿವ  ಜನಾರ್ಧನ ಪೂಜಾರಿಯವರ ಬಿ ಮೂಡಾ ಗ್ರಾಮದ ಬಸ್ತಿಪಡ್ಪುವಿನಲ್ಲಿರುವ ನಿವಾಸಕ್ಕೆ ತೆರಳಿ ದಿನಾಂಕ 16-04-2024 ಮತದಾನ ಪ್ರಕ್ರಿಯೆ ನಡೆಸಲಾಯಿತು. ಮತದಾರರ ಪಟ್ಟಿಯಂತೆ ಇವರಿಗೆ 87 ವರ್ಷ ವಯಸ್ಸಾಗಿದ್ದು, ಈ ಹಿಂದೆ ಭಂಡಾರಿಬೆಟ್ಟು ಶಾಲೆಯ ಭಾಗಸಂಖೈ 130 ಮತಗಟ್ಟೆಗೆ ತೆರಳಿ ಮತದಾನ ಮಾಡುತ್ತಿದ್ದರು.

Font Awesome Icons

Leave a Reply

Your email address will not be published. Required fields are marked *