ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಶಾರುಖ್ ಖಾನ್

ಆಂಧ್ರಪ್ರದೇಶ:  ಶಾರುಖ್ ಖಾನ್ ಅವರು ಇಂದು (ಸೆ.5) ತಿರುಪತಿ ತಿಮ್ಮಪ್ಪನ ದರ್ಶನ ಪಡೆದಿದ್ದಾರೆ. ಈ ವಿಡಿಯೋ ಹಾಗೂ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಶಾರುಖ್ ಖಾನ್ ಜೊತೆ ಮಗಳು ಸುಹಾನಾ ಖಾನ್, ಸಹ ಕಲಾವಿದೆ ನಯನತಾರಾ ಹಾಗೂ ನಟಿಯ ಪತಿ ವಿಘ್ನೇಶ್ ಶಿವನ್ ಕೂಡ ಇದ್ದರು. ಶಾರುಖ್ ಭಕ್ತಿಗೆ ಅನೇಕರು ಮೆಚ್ಚುಗೆ ಸೂಚಿಸಿದ್ದಾರೆ.

ಇತ್ತೀಚೆಗೆ ಜಮ್ಮು-ಕಾಶ್ಮೀರದ ವೈಷ್ಣೋ ದೇವಿ ಮಂದಿರಕ್ಕೆ ಶಾರುಖ್ ಭೇಟಿ ನೀಡಿದ್ದರು. ಈಗ ತಿರುಪತಿ ತಿಮ್ಮಪ್ಪನ ದರ್ಶನ ಪಡೆದಿದ್ದಾರೆ. ಇದಕ್ಕೆ ಅನೇಕರು ವಿರೋಧ ವ್ಯಕ್ತಪಡಿಸಿದ್ದಾರೆ.

ಶಾರುಖ್ ಖಾನ್ ಅವರು ‘ಜವಾನ್’ ಸಿನಿಮಾ ಬಗ್ಗೆ ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ.  ಚಿತ್ರದ ಅಡ್ವಾನ್ಸ್ ಬುಕಿಂಗ್ ಓಪನ್ ಆಗಿದ್ದು, ಮುಂಜಾನೆ ಟಿಕೆಟ್​ಗಳು ಸೋಲ್ಡ್​ಔಟ್ ಆಗುತ್ತಿದೆ. ಈ ವರ್ಷ ತೆರೆಗೆ ಬರುತ್ತಿರುವ ಶಾರುಖ್ ಖಾನ್ ನಟನೆಯ ಎರಡನೇ ಸಿನಿಮಾ.

Font Awesome Icons

Leave a Reply

Your email address will not be published. Required fields are marked *