ತೆಲಂಗಾಣದ ಬಿಆರ್​ಎಸ್​ ಪಕ್ಷದ ಶಾಸಕಿ ಅಪಘಾತದಲ್ಲಿ ಸಾವು

ಹೈದರಾಬಾದ್: ತೆಲಂಗಾಣದ ಬಿಆರ್​ಎಸ್​  ಪಕ್ಷದ ಶಾಸಕಿ ಲಾಸ್ಯ ನಂದಿತಾ (33)  ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ.

ಹೈದರಾಬಾದ್  ಒಆರ್‌ಆರ್‌ನಲ್ಲಿ  ಪ್ರಯಾಣಿಸುತ್ತಿದ್ದ ಕಾರು ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ ಹೊಡೆದಿದೆ. ಅತಿವೇಗದಲ್ಲಿ ಕಾರು ಡಿವೈಡರ್‌ಗೆ ಡಿಕ್ಕಿ ಹೊಡೆದಿದ್ದರಿಂದ ಲಾಸ್ಯ ಸ್ಥಳದಲ್ಲೇ ಸಾವನ್ನಪ್ಪಿದ್ದು, ಚಾಲಕ ಗಂಭೀರವಾಗಿ ಗಾಯಗೊಂಡಿದ್ದಾನೆ.

ಇತ್ತೀಚೆಗಷ್ಟೇ ಶಾಸಕಿ ಬಿಆರ್‌ಎಸ್  ನಲ್ಗೊಂಡ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಿ, ಬಳಿಕ ಮನೆಗೆ ಮರಳುತ್ತಿದ್ದಾಗ ಅವರ ಕಾರು ಅಪಘಾತಕ್ಕೀಡಾಗಿತ್ತು. ಆದರೆ ಆಕೆ ಸುರಕ್ಷಿತವಾಗಿ ಅಪಘಾತದಿಂದ ಪಾರಾಗಿದ್ದರು. ಆ ಸಂದರ್ಭದಲ್ಲಿ ಕರ್ತವ್ಯದಲ್ಲಿದ್ದ ಗೃಹರಕ್ಷಕ ದಳದ ಸಿಬ್ಬಂದಿ ಮೃತಪಟ್ಟಿದ್ದರು.

ಸಿಕಂದರಾಬಾದ್​ನ ಕಂಟೋನ್ಮೆಂಟ್ ಶಾಸಕಿ ಲಾಸ್ಯ ನಂದಿತಾ ಅವರ ನಿಧನಕ್ಕೆ ಬಿಆರ್‌ಎಸ್ ನಾಯಕರು ಕಂಬನಿ ಮಿಡಿದಿದ್ದಾರೆ. ಸ್ವಲ್ಪ ಸಮಯದ ನಂತರ, ಮೃತದೇಹವನ್ನು ಚಿಕ್ಕಡಪಲ್ಲಿಯಲ್ಲಿರುವ ಅವರ ನಿವಾಸಕ್ಕೆ ಕೊಂಡೊಯ್ಯಲಾಗುತ್ತದೆ.

Font Awesome Icons

Leave a Reply

Your email address will not be published. Required fields are marked *