ದಾವಣಗೆರೆಯಲ್ಲಿ ಡೆಂಗ್ಯೂ ಜ್ವರಕ್ಕೆ ಮಗು ಮೃತ್ಯು

ದಾವಣಗೆರೆ: ಡೆಂಗ್ಯೂ ಜ್ವರಕ್ಕೆ 2 ವರ್ಷ 11 ತಿಂಗಳ ಮಗು ಬಲಿಯಾಗಿರುವ ಘಟನೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಚಿಕ್ಕೂಡ ಗ್ರಾಮದಲ್ಲಿ ನಡೆದಿದೆ. ಮೃತ ಮಗುವನ್ನು ಚಿಕ್ಕೂಡ ಗ್ರಾಮದ ರಾಜಪ್ಪ ಮತ್ತು ದಿವ್ಯ ದಂಪತಿಯ 2 ವರ್ಷದ 11 ತಿಂಗಳ ನಿರ್ವಾಣ ಕುಮಾರ್ ಎಂದು ಗುರುತಿಸಲಾಗಿದೆ.

5 ದಿನಗಳಿಂದ ಮಗು ತೀವ್ರ ಜ್ವರದಿಂದ ಬಳಲುತ್ತಿತ್ತು. ಚಿಕಿತ್ಸೆಗಾಗಿ ಮಗುವನ್ನು ಜಿಲ್ಲೆಯ ಶಿವಮೊಗ್ಗದ ಸರ್ಜಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಬಳಿಕವು ಸ್ವಲ್ಪವೂ ಚೇತರಿಕೆ ಕಾಣದೇ ಮಗು ಸಾವನ್ನಪ್ಪಿದೆ. ಗ್ರಾಮದಲ್ಲಿ ಸ್ವಚ್ಚತೆ ಇಲ್ಲದಿರುವುದರಿಂದ ಡೆಂಗ್ಯೂಗೆ ಕಾರಣವಾಗಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

Font Awesome Icons

Leave a Reply

Your email address will not be published. Required fields are marked *