ದೂರು ದಾಖಲು – News Karnataka Kannada (ನ್ಯೂಸ್ ಕರ್ನಾಟಕ ಕನ್ನಡ)

ಹುಬ್ಬಳ್ಳಿ: ಬಿವಿಬಿ ಕಾಲೇಜಿನಲ್ಲಿ ನಡೆದ ನೇಹಾ ಹಿರೇಮಠ ಅವರ ಭೀಕರ ಕೊಲೆ ಪ್ರಕರಣವು ರಾಜ್ಯಾದ್ಯಂತ ಸುದ್ದಿಯಾಗಿದೆ.ಇದರ ಬೆನ್ನಲ್ಲೇ, ಹುಬ್ಬಳ್ಳಿಯಲ್ಲಿ ಮತ್ತೊಬ್ಬ ಹಿಂದು ಯುವತಿ ಮೇಲೆ ಮುಸ್ಲಿಂ ಯುವಕನು ಹಲ್ಲೆ ನಡೆಸಿದ್ದಾನೆ ಎಂಬ ಮಾಹಿತಿ ಮೂಲಗಳಿಂದ ತಿಳಿದು ಬಂದಿದೆ.

ಅಫ್ತಾಬ್‌ ಶಿರಹಟ್ಟಿ ಎಂಬ ಯುವಕನು ಪೂರ್ಣಿಮಾ ಎನ್ನುವ ಹಿಂದು ಯುವತಿ ಮೇಲೆ ಹಲ್ಲೆ ನಡೆಸಿದ್ದಾನೆ.

ಈ ಕುರಿತು ಯುವತಿಯು ಹುಬ್ಬಳ್ಳಿಯ ಕೇಶ್ವಾಪುರ ಪೊಲೀಸ್‌ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ ಎಂದು ತಿಳಿದುಬಂದಿದೆ. ಆದಾಗ್ಯೂ, ಹಿಂದು ಯುವತಿ ಮೇಲೆ ಮುಸ್ಲಿಂ ಯುವಕನು ದಾಳಿ ಮಾಡಲು ನಿಖರ ಕಾರಣ ತಿಳಿದುಬಂದಿಲ್ಲ.

ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.

Font Awesome Icons

Leave a Reply

Your email address will not be published. Required fields are marked *