ದೇಶದ ಅಗ್ರಗಣ್ಯ ಕೈಗಾರಿಕೋದ್ಯಮಿ ರತನ್ ಟಾಟಾ ಇನ್ನಿಲ್ಲ

ದೇಶದ ಅಗ್ರಗಣ್ಯ ಉದ್ಯಮಿ, ಅತ್ಯಂತ ಗೌರವಾನ್ವಿತ ವ್ಯಕ್ತಿ, ಟಾಟಾ ಸನ್ಸ್ ಗೌರವಾಧ್ಯಕ್ಷ ರತನ್ ನಾವಲ್ ಟಾಟಾ (86) ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಹಿರಿಯ ಜೀವ ಚಿಕಿತ್ಸೆಗಾಗಿ ಮೊನ್ನೆಯಷ್ಟೇ ಮುಂಬೈನಲ್ಲಿ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಮತ್ತೆ ಅವರ ಅನಾರೋಗ್ಯ ಉಲ್ಬಣಿಸಿದಾಗ ಆಸ್ಪತ್ರೆಗೆ ಸೇರಿಸಲಾಗಿತ್ತು. ಬುಧವಾರ ರಾತ್ರಿ ರತನ್ ಟಾಟಾ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ಶ್ರೀಮತಿ ಸೂನಿ ಮತ್ತು ನಾವಲ್ ಹರ್ಮುಸ್ ಜಿ ಟಾಟಾ ದಂಪತಿಯ ಹಿರಿಯ ಮಗನಾಗಿ ರತನ್ ಟಾಟಾ ಬೊಂಬಾಯಿನಲ್ಲಿ 1937ರಲ್ಲಿ ಜನಿಸಿದರು. ರತನ್ ಟಾಟಾ ಅವರಿಗೆ ಭಾರತ ಸರ್ಕಾರವು 2008 ರಲ್ಲಿ ದೇಶದ ಎರಡನೇ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಪದ್ಮವಿಭೂಷಣವನ್ನು ನೀಡಿ ಗೌರವಿಸಿತು. ಅವಿವಾಹಿತ ರತನ್ ಟಾಟಾ ಅವರು ಅಪರೂಪದ ಉದ್ಯಮಿಯಾಗಿ ಬೆಳೆದು ದೇಶದ ಕೈಗಾರಿಕಾ ಕ್ಷೇತ್ರದಲ್ಲಿ ದಂತಕತೆಯಾಗಿದ್ದರು. ದೇಶದ ಆಸ್ತಿಯಾಗಿದ್ದ ರತನ್ ಟಾಟಾ ಅವರು ತಮ್ಮ ಗಳಿಕೆಯನ್ನೆಲ್ಲಾ ದಾನಧರ್ಮಗಳಲ್ಲಿ ವಿನಿಯೋಗಿಸಿದ್ದಾರೆ. ಇನ್ನು ರತನ್ ಟಾಟಾ ವಿಧಿವಶರಾದ ಸುದ್ದಿ ಕೇಳಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ತಮ್ಮ ಎಕ್ಸ್​ ಖಾತೆಯಲ್ಲಿ ಟ್ವೀಟ್​ ಮಾಡಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

Font Awesome Icons

Leave a Reply

Your email address will not be published. Required fields are marked *